HomeLatest Newsಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸುಳ್ಳು ಸುದ್ದಿ: ಬಿಜೆಪಿ ಜಾಲತಾಣ, ಕಾರ್ಯಕರ್ತೆ ವಿರುದ್ಧ ಕೇಸ್ ದಾಖಲು

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸುಳ್ಳು ಸುದ್ದಿ: ಬಿಜೆಪಿ ಜಾಲತಾಣ, ಕಾರ್ಯಕರ್ತೆ ವಿರುದ್ಧ ಕೇಸ್ ದಾಖಲು

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸುಳ್ಳು ಸುದ್ದಿ ಹರಾಡಿದ ಆರೋಪದ ಮೇಲೆ ತುಮಕೂರಿನ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಹಾಗೂ ಬಿಜೆಪಿ ಸಾಮಾಜಿಕ ಜಾಲತಾಣದ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್ ನೀಡಿದ ದೂರಿನ ಅನ್ಭಯ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಚಿವರಿಗೆ ಸಂಬಂಧವಿಲ್ಲದಿದ್ದರೂ ಕ್ರೀಡಾಪಟುವೊಬ್ಬರ ವಿಡಿಯೋವೊಂದನ್ನು ಸಚಿವರಿಗೆ ಸಂಬಂಧಿಸಿದ್ದು ಎಂದು ವಿರುದ್ಧ ಆರೋಪ ಮಾಡಿ ವ್ಯವಸ್ಥಿತವಾಗಿ ಸುಳ್ಳು ಸುದ್ದಿ ಹರಡುವ ಮೂಲಕ ವ್ಯಕ್ತಿತ್ವಕ್ಕೆ ಕುಂದು ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ದೂರಲಾಗಿದೆ.

ಸಾಮಾಜಿಕ ಜಾಲತಾಣದ ಪೇಜ್ ನಲ್ಲಿಯೂ ಸಚಿವರನ್ನು ಪಕ್ಕಾ ಲೋಕಲ್ ರೌಡಿ, ಟ್ವೀಟ್ ಶೂರ ಅಪ್ಪನ ಹೆಸರಲ್ಲಿ ಸಚಿವನಾದವ ಎಂದು ಕೀಳು ಮಟ್ಟದ ಪದ ಬಳಕೆ ಮಾಡಲಾಗಿದೆ. ಈ ಅಪ್ಪ ಮಗನ ವರ್ತನೆಯಿಂದ ಉತ್ತರ ಕರ್ನಾಟಕ ಹಿಂದುಳಿದಿದೆ ಎಂದು ಪ್ರಾದೇಶಿಕ ಅಸಮಾನತೆ ದ್ವೇಷ ಭಾವನೆ ಬಿತ್ತಲು ಪ್ರಯತ್ನಿಸಲಾಗಿದೆ ಎಂದು ದೂರು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜನವರಿ 16ರಂದು ವಿಚಾರಣೆಗೆ ಬರುವಂತೆ ಶಕುಂತಲಾ ನಟರಾಜ್ ಅವರಿಗೆ ಕಲಬುರಗಿ ಪೊಲೀಸರು ನೋಟಿಸ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular