HomeKarnatakaನಕಲಿ ನೋಟ್ ಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರು ಅರೆಸ್ಟ್

ನಕಲಿ ನೋಟ್ ಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರು ಅರೆಸ್ಟ್

ಬಳ್ಳಾರಿ: ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರನ್ನು ಗಾಂಧಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲರ್ ಜೆರಾಕ್ಸ್ ಪ್ರಿಂಟರ್, ನೂರು ರೂಪಾಯಿ ಮುಖಬೆಲೆಯ 80 ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತರನ್ನು ಬಳ್ಳಾರಿ ನಗರದ ಬಿಸಿಲಹಳ್ಳಿ ಹರೀಶ್ ಮತ್ತು ಅಶೋಕ್ ಎಂದು ಗುರುತಿಸಲಾಗಿದೆ. ಬ್ಯಾಂಕ್ ಆಫ್ ಬರೋಡದಲ್ಲಿ ಗುತ್ತಿಗೆ ಕೆಲಸ ಮಾಡಿಕೊಂಡಿದ್ದ ಅಶೋಕ್ ಬ್ಯಾಂಕಿನಲ್ಲಿ ನೋಟು ಚಲಾವಣೆಯ ವಹಿವಾಟು ಅರಿತುಕೊಂಡಿದ್ದ. ಹರೀಶನೊಂದಿಗೆ ಸೇರಿ ನೋಟುಗಳನ್ನು ಪ್ರಿಂಟ್ ಮಾಡಲು ಮುಂದಾಗಿದ್ದ. ಇಬ್ಬರು ಸೇರಿಕೊಂಡು ಬಳ್ಳಾರಿಯ ಕೋಲಾಚಲಂ ಕಾಂಪೌಂಡ್ ನಲ್ಲಿರುವ ಮೋಹನ್ ಲಾಡ್ಜ್ ನಲ್ಲಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದರು.

ಈ ಬಗ್ಗೆ ಮಾಹಿತಿ ಕಲೆ ಹಾಕಿದ ಸಿಪಿಐ ಸಿದ್ದರಾಮೇಶ್ವರ, ಪಿಎಸ್ಐ ಸೌಮ್ಯಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ. ತನಿಖೆಯ ಸಂದರ್ಭದಲ್ಲಿ ನಕಲಿ ನೋಟುಗಳನ್ನು ಎಲ್ಲಿಯೂ ಚಲಾವಣೆ ಮಾಡಿಲ್ಲ ಎನ್ನುವುದು ಗೊತ್ತಾಗಿದೆ. ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular