HomeKarnatakaBREAKING: ನಕಲಿ ನೋಟು ದಂಧೆಯಲ್ಲಿ ತೊಡಗಿದ್ದ ಪೊಲೀಸ್ ಸೇರಿ ನಾಲ್ವರು ಅರೆಸ್ಟ್

BREAKING: ನಕಲಿ ನೋಟು ದಂಧೆಯಲ್ಲಿ ತೊಡಗಿದ್ದ ಪೊಲೀಸ್ ಸೇರಿ ನಾಲ್ವರು ಅರೆಸ್ಟ್

ರಾಯಚೂರು: ರಾಯಚೂರಿನಲ್ಲಿ ನಕಲಿ ದಂಧೆಯ ಮೇಲೆ ಪೊಲೀಸರಿಂದ ದಾಳಿ ನಡೆಸಲಾಗಿದ್ದು, ರಾಯಚೂರಿನ ಡಿಎಆರ್ ಕಾನ್ಸ್ಟೇಬಲ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಪ್ರಮುಖ ಆರೋಪಿ ಸದ್ದಾಮ್ ಅಲಿಯಾಸ್ ಮೊಹಮ್ಮದ್ ಯಾಸಿನ್, ರಾಯಚೂರಿನ ಶಶಸ್ತ್ರ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಮರಿಲಿಂಗ, ರಮೇಶ ಆದಿ, ಶಿವಲಿಂಗ ಅವರನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ.

ದಾಳಿಯ ವೇಳೆ ಬಿಳಿ ಕಾಗದ, ಕಚ್ಚಾ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಹಾಗೂ ರಾಯಚೂರು ಪಶ್ಚಿಮ ಠಾಣೆ ಪೋಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಗಳು ನಕಲಿ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದರು. ರಾಯಚೂರು ಜಿಲ್ಲೆಯ ವಿವಿಧೆಡೆ ನಕಲಿ ನೋಟುಗಳನ್ನು ಚಲಾವಣೆ ಮಾಡಿದ್ದಾರೆ ಎನ್ನಲಾಗಿದ್ದು, ಪೊಲೀಸರು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular