HomeKarnatakaBREAKING: ನಕಲಿ ನೋಟು ಚಲಾವಣೆ: ಬೆಳಗಾವಿಯಲ್ಲಿ ನಾಲ್ವರು ಆರೋಪಿಗಳು ಅರೆಸ್ಟ್

BREAKING: ನಕಲಿ ನೋಟು ಚಲಾವಣೆ: ಬೆಳಗಾವಿಯಲ್ಲಿ ನಾಲ್ವರು ಆರೋಪಿಗಳು ಅರೆಸ್ಟ್

ಬೆಳಗಾವಿ: ನಕಲಿ ನೋಟು ಚಲಾವಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬೆಳಗಾವಿಯ ಮಾರ್ಕೆಟ್ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ ಅರ್ಬಾಜ (21), ರೂಪೇಶ ಹನುಮಂತ ವಾಕೋಡೆ (26) ಮೊಹಮ್ಮದ ಹುಸೇನ ಬಕ್ಷಿ (23) ಹಾಗೂ ಶ್ರವಣಕುಮಾರ (25) ಎಂದು ಗುರುತಿಸಲಾಗಿದೆ.

ಆರೋಪಿಗಳು ಖಡೇಬಜಾರ ರಸ್ತೆಯಲ್ಲಿರುವ ಅಂಗಡಿಯಲ್ಲಿ ಸಾಮಾನು ಖರೀದಿ ಮಾಡಿ 500 ರೂ. ಮುಖಬೆಲೆಯ ನಕಲಿ ನೋಟು ನೀಡುವಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಆರೋಪಿಗಳನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಕೆಟ್ ಪೊಲೀಸ್ ಠಾಣೆಯ ಪಿಐ ಜೆ. ಎಂ ಕಾಲಮಿರ್ಚಿ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳ ಬಳಿ ಇದ್ದ 500 ಮುಖ ಬೆಲೆಯ 495 ನಕಲಿ ನೋಟುಗಳು, ನಾಲ್ಕು ಮೋಬೈಲ್ ಹ್ಯಾಂಡಸೆಟ್‌ಗಳು, ಮಾರುತಿ ಸುಜುಕಿ ಕಂಪನಿಯ ಸ್ವಿಪ್ಟ್ ಕಾರು ಜಪ್ತಿ ಮಾಡಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಮಾರ್ಕೆಟ್ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular