HomeKarnatakaಅಪ್ರಾಪ್ತೆ ಬಾಲ್ಯವಿವಾಹಕ್ಕೆ ನಕಲಿ ಶಾಲಾ ದೃಢೀಕರಣ ಪತ್ರ: ಪೋಷಕರ ವಿರುದ್ಧ ಕೇಸ್ ದಾಖಲು

ಅಪ್ರಾಪ್ತೆ ಬಾಲ್ಯವಿವಾಹಕ್ಕೆ ನಕಲಿ ಶಾಲಾ ದೃಢೀಕರಣ ಪತ್ರ: ಪೋಷಕರ ವಿರುದ್ಧ ಕೇಸ್ ದಾಖಲು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಾಳಕೇರಿ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಬಾಲ್ಯವಿವಾಹವನ್ನು ಮಾಡಲು ನಕಲಿ ಶಾಲಾ ದೃಢೀಕರಣ ಪತ್ರವನ್ನು ನೀಡಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.

ಯಲಬುರ್ಗಾ ತಾಲೂಕಿನ ತಾಳಕೇರಿ ಗ್ರಾಮದ ಈಶ್ವರ ದೇವಸ್ಥಾನದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ವಿವಾಹಕ್ಕಾಗಿ ನಕಲಿ ಶಾಲಾ ದೃಢೀಕರಣ ಪತ್ರ ನೀಡಿದ್ದ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಪರಿಶೀಲಿಸಿದ್ದು, ನಕಲಿ ಸಮಿತಿಯ ವಿರುದ್ಧ ಶಾಲಾ ದೃಢೀಕರಣ ಪತ್ರವನ್ನು ನೀಡಿದ ಬಾಲಕಿಯ ಪಾಲಕರು ಹಾಗೂ ಈಶ್ವರ ದೇವಸ್ಥಾನ ಸಮಿತಿಯ ಭಾರತೀಯ ನ್ಯಾಯ ಸಂಹಿತಿ ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಯಡಿಯಲ್ಲಿ ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಅಲ್ಲದೇ ಈ ರೀತಿಯ ಪ್ರಕರಣಗಳು ಪುನರಾವರ್ತನೆಯಾಗದಂತೆ ಅಧೀನ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನವನ್ನು ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಬಾಲ್ಯವಿವಾಹ ಮಾಡುವುದು, ಬಾಲ್ಯವಿವಾಹಕ್ಕೆ ಸಹಕಾರ, ಪ್ರೋತ್ಸಾಹ ನೀಡುವುದು ಸಹ ಶಿಕ್ಷಾರ್ಹ ಅಪರಾಧವಾಗಿದೆ. ಆದ್ದರಿಂದ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹವನ್ನು ಮಾಡಲು ಯಾವುದೇ ರೀತಿಯ ನಕಲಿ ದಾಖಲೆಗಳನ್ನು ಸೃಷ್ಟಿಸಿದವರ ವಿರುದ್ಧ ಕಾನೂನು ರೀತ್ಯಾ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular