HomeKarnatakaಸಿಎಂ ಹೆಸರಲ್ಲಿ ನಕಲಿ ವರ್ಗಾವಣೆ ಟಿಪ್ಪಣಿ: ಎಫ್ಐಆರ್ ದಾಖಲು

ಸಿಎಂ ಹೆಸರಲ್ಲಿ ನಕಲಿ ವರ್ಗಾವಣೆ ಟಿಪ್ಪಣಿ: ಎಫ್ಐಆರ್ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಲ್ಲಿ ನಕಲಿ ವರ್ಗಾವಣೆ ಟಿಪ್ಪಣಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆ ಪೊಲೀಸರು ದಾಖಲಿಸಿದ್ದಾರೆ.

ಮುಖ್ಯಮಂತ್ರಿ ಜಂಟಿ ಕಾರ್ಯದರ್ಶಿ(ಆಡಳಿತ) ಅವರ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಾಯ್ದೆಯ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಧಿಕೃತ ಸಂಖ್ಯೆ ದಿನಾಂಕವಿಲ್ಲದ ವರ್ಗಾವಣೆಯ ಟಿಪ್ಪಣಿ ಸೃಷ್ಟಿಸಿ ಹರಿಬಿಡಲಾಗಿದೆ.

ಮುಖ್ಯಮಂತ್ರಿ ಸಚಿವಾಲಯದ ಇ- ತಂತ್ರಾಂಶದಲ್ಲಿ ಅದು ನೋಂದಣಿಯಾಗಿಲ್ಲ. ಟಿಪ್ಪಣಿಯನ್ನು ಯಾವುದೇ ಇಲಾಖೆಗೆ ರವಾನೆ ಮಾಡಿಲ್ಲ. ಇದರ ಆಧಾರದಲ್ಲಿ ಯಾವುದೇ ವರ್ಗಾವಣೆ, ನಿಯೋಜನೆ ಆದೇಶ ಸಹ ಹೊರಡಿಸಿಲ್ಲ. ಹೀಗಿದ್ದರೂ ಮುಖ್ಯಮಂತ್ರಿಗಳು ಮತ್ತು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕೃತ್ಯವೆಸಗಲಾಗಿದೆ ಎಂದು ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯ ಜಿಲ್ಲೆ ಆರೋಗ್ಯ ಇಲಾಖೆ ಅಧಿಕಾರಿ ಡಾ.ಕೆ. ಮೋಹನ್ ಅವರನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನುವ ರೀತಿ ಟಿಪ್ಪಣಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿ ಬಿಡಲಾಗಿತ್ತು.

ಈ ಬಗ್ಗೆ ಬಿಜೆಪಿ ನಾಯಕರು ಟೀಕಿಸಿದ್ದರು. ಇಂತಹ ಅಪಪ್ರಚಾರ ಸಹಿಸುವುದಿಲ್ಲ, ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮೊದಲು ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸುವಂತೆ ಸಿದ್ದರಾಮಯ್ಯ ತಿಳಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular