HomeKarnatakaBIG NEWS: ನಕಲಿ ವೋಟರ್ ಐಡಿ ಕೇಸ್; ಮೂವರು ಆರೋಪಿಗಳು ಅರೆಸ್ಟ್

BIG NEWS: ನಕಲಿ ವೋಟರ್ ಐಡಿ ಕೇಸ್; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಪತ್ತೆಯಾದ ನಕಲಿ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಭರತ್, ಮೌನೇಶ್, ರಾಘವೇಂದ್ರ ಬಂಧಿತ ಆರೋಪಿಗಳು. ಬಂಧಿತರ ಬಳಿ ಇದ್ದ 53 ನಕಲಿ ವೋಟರ್ ಐಡಿಗಳನ್ನು ಹೆಬ್ಬಾಳ ಪೊಲಿಸರು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಗಳು ಕಂಪ್ಯೂಟರ್ ಅಂಗಡಿ ಇಟ್ಟುಕೊಂಡಿದ್ದರು. ಉತ್ತರ ಭಾರತದಿಂದ ಬಂದವರಿಗೆ ಹಣ ಪಡೆದು ನಕಲಿ ವೋಟರ್ ಐಡಿ, ಪಾನ್ ಕಾರ್ಡ್ ಆಧಾರ್ ಕಾರ್ಡ್ ಗಳನ್ನು ತಯಾರಿಸಿ ಕೊಡುತ್ತಿದ್ದರು. ಜಪ್ತಿ ಮಾಡಲಾಗಿರುವ ನಕಲಿ ವೋಟರ್ ಐಡಿಗಳನ್ನು ಚುನವಣಾ ಆಯೋಗಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular