HomeInternationalಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪ: 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ...

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪ: 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ

ದುಬೈ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೃತ್ರಿಮ ವಿಡಿಯೋಗಳನ್ನು ಹಂಚಿ, ದಾರಿ ತಪ್ಪಿಸುವಂತಹ ಸುದ್ದಿ ಪ್ರಕಟಿಸಿದ ಆರೋಪದಲ್ಲಿ 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ ಯುಎಇ ಆದೇಶ ನೀಡಿದೆ.

ಬಂಧಿತರನ್ನು ತ್ವರಿತವಾಗಿ ವಿಚಾರಣೆ ನಡೆಸಲು ಸೂಚಿಸಲಾಗಿದೆ. ಈ ಬಗ್ಗೆ ಯುಎಇ ಅಧಿಕೃತ ಸುದ್ದಿಸಂಸ್ಥೆ ವಾಮ್ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಉದ್ದೇಶದಿಂದ ಸುಳ್ಳು ಮಾಹಿತಿ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ವಿಷಯಗಳ ಪ್ರಸಾರವನ್ನು ತಡೆಗಟ್ಟಲು ಡಿಜಿಟಲ್ ವೇದಿಕೆಗಳ ಮೇಲೆ ನಡೆಸಿದ ಕಟ್ಟುನಿಟ್ಟಿನ ನಿಗಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಟಾರ್ನಿ ಜನರಲ್ ಡಾ. ಹಮದ್ ಸೈಫ್ ಅಲ್ ಶಮ್ತಿ ತಿಳಿಸಿದ್ದಾರೆ.

ಈಗಾಗಲೇ ಪ್ರಾಸಿಕ್ಯೂಷನ್ ಹತ್ತು ಆರೋಪಿಗಳ ವಿಚಾರಣೆ ಆರಂಭಿಸಿದೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸುಳ್ಳು ಸುದ್ದಿ ಹರಡುವಂತಹ ಕೃತ್ಯಗಳು ಶಿಕ್ಷಾರ್ಹ ಅಪರಾಧವಾಗಿದ್ದು, ಕನಿಷ್ಠ ಒಂದು ವರ್ಷ ಜೈಲು ಶಿಕ್ಷೆ ಮತ್ತು ಕನಿಷ್ಠ 1,00,000ದಿರ್ಹಮ್ ದಂಡ ವಿಧಿಸಲು ಅವಕಾಶವಿದೆ ಎಂದು ವಿವರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular