HomeLatest Newsಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಬಗ್ಗೆ ಸುಳ್ಳು ಮಾಹಿತಿ: ವಕೀಲ ಮಂಜುನಾಥ್ ವಿರುದ್ಧ ಕೇಸ್ ದಾಖಲು

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಬಗ್ಗೆ ಸುಳ್ಳು ಮಾಹಿತಿ: ವಕೀಲ ಮಂಜುನಾಥ್ ವಿರುದ್ಧ ಕೇಸ್ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಬಗ್ಗೆ ಸುಳ್ಳು ಮಾಹಿತಿ ನೀಡಿದ ವಕೀಲ ಮಂಜುನಾಥ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ ಎಂಬುವರು ದೂರು ನೀಡಿದ್ದು ಈ ದೂರನ್ನು ಆಧರಿಸಿ ವಕೀಲ ಮಂಜುನಾಥ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಯಥೇಚ್ಛವಾಗಿ ಹೆಣಗಳನ್ನು ಹೂತು ಹಾಕಿದ್ದಾನೆ ಎಂದು ವಕೀಲ ಮಂಜುನಾಥ್ ಮಾಧ್ಯಮ ಪ್ರಕಟಣೆ ನೀಡಿದ್ದರು. ಪಾಯಿಂಟ್ 1ರಲ್ಲಿ 2, ಪಾಯಿಂಟ್ 2ರಲ್ಲಿ 3, ಪಾಯಿಂಟ್ 4 ಮತ್ತು 5ರಲ್ಲಿ ತಲಾ 8 ಹೆಣಗಳು, ಪಾಯಿಂಟ್ 9ರಲ್ಲಿ 6ರಿಂದ 7 ಹೆಣಗಳು, ಪಾಯಿಂಟ್ 13ರಲ್ಲಿ ಯಥೇಚ್ಛವಾಗಿ ಹೆಣಗಳನ್ನು ಹೂತಿದ್ದಾನೆ ಎಂದು ಮಾಧ್ಯಮ ಪ್ರಕಟಣೆ ನೀಡಿದ್ದರು. ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್ಐಟಿ ತನಿಖೆ ಬಗ್ಗೆ ಅನಧಿಕೃತ ಮಾಹಿತಿಗಳನ್ನು ಒಳಗೊಂಡ ಸುಳ್ಳು ಪತ್ರಿಕಾ ಪ್ರಕಟಣೆ ಪ್ರಸಾರ ಮಾಡಿದ ಆರೋಪದ ಮೇಲೆ ವಕೀಲ ಮಂಜುನಾಥ್ ಅವರ ಕೇಸ್ ದಾಖಲಿಸಲಾಗಿದೆ.  

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular