HomeCrimeಪತಿ ಬಿಟ್ಟು ಪ್ರಿಯಕರನೊಂದಿಗೆ ಓಡಿ ಹೋಗಿದ್ದ ಯುವತಿ ಹತ್ಯೆಗೈದು ಬೆಂಕಿ ಹಚ್ಚಿದ ಕುಟುಂಬದವರು

ಪತಿ ಬಿಟ್ಟು ಪ್ರಿಯಕರನೊಂದಿಗೆ ಓಡಿ ಹೋಗಿದ್ದ ಯುವತಿ ಹತ್ಯೆಗೈದು ಬೆಂಕಿ ಹಚ್ಚಿದ ಕುಟುಂಬದವರು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುಟುಂಬದ ಮರ್ಯಾದೆ ತೆಗೆದಳೆಂದು ಯುವತಿಯನ್ನು ಕೊಲೆ ಮಾಡಿ ಸುಟ್ಟು ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತನ್ನ ಪತಿಯೊಂದಿಗೆ ಜೀವನ ನಡೆಸದೇ ಪ್ರಿಯಕರನೊಂದಿಗೆ ಓಡಿ ಹೋಗಿ ಕುಟುಂಬದ ಮರ್ಯಾದೆ ತೆಗೆದಿದ್ದಾಳೆ ಎನ್ನುವ ಕಾರಣಕ್ಕೆ ಯುವತಿಯನ್ನು ಕುಟುಂಬದವರೇ ಹತ್ಯೆ ಮಾಡಿದ್ದಾರೆ. ನಂತರ ಸಾಕ್ಷ್ಯ ನಾಶಕ್ಕಾಗಿ ಶವ ಸುಟ್ಟು ಹಾಕಿದ್ದಾರೆ. ಮಾರ್ಚ್ 13ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಾಯಭಾಗ ತಾಲೂಕಿನ ಹಣಬರಟ್ಟಿ ಗ್ರಾಮದ ಸತ್ಯವ್ವ(24) ಕೊಲೆಯಾದ ಯುವತಿ. ಯುವತಿ ಸಾವಿಗೆ ಸಂಬಂಧಿಸಿದಂತೆ ಹುಕ್ಕೇರಿ ತಾಲೂಕಿನ ನದಿಗುಡಿಕ್ಷೇತ್ರ ಗ್ರಾಮದ ಯುವತಿಯ ಚಿಕ್ಕಪ್ಪ ಪ್ರಕಾಶ, ಆಕೆಯ ಸಹೋದರ ಶಾನೂರ ಹೆಳವರ, ಯುವತಿಯ ಸಹೋದರಿಯ ಪತಿ ರಾಯಭಾಗ ತಾಲೂಕಿನ ಮರಬದ ಕಲ್ಲಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸತ್ಯವ್ವಳನ್ನು ಸಂತೋಷ್ ಜೊತೆಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಸತ್ಯತ್ವ ಪತಿಯನ್ನು ಬಿಟ್ಟು ತಾನು ಪ್ರೀತಿಸಿದ ಕೃಷ್ಣ ಪಾಟೀಲ್(28) ಜತೆಗೆ ಓಡಿಹೋಗಿದ್ದಳು. ಈ ಬಗ್ಗೆ ನಾಪತ್ತೆ ದೂರು ಕೂಡ ದಾಖಲಾಗಿತ್ತು. ಸತ್ಯವ್ವ ಕಡೆಯ ಕುಟುಂಬದವರು ಇವರನ್ನು ಪತ್ತೆ ಮಾಡಿ ನಂತರ ಆಕೆಯನ್ನು ಹತ್ಯೆ ಮಾಡಿ ಶವ ಸುಟ್ಟು ಹಾಕಿದ್ದಾರೆ. ಯಮುಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular