HomeKarnatakaಕುಟುಂಬ ಸಮೇತ ಪುಣ್ಯಕ್ಷೇತ್ರಗಳ ಪ್ರವಾಸ ಮುಗಿಸಿ ಬಂದವರಿಗೆ ಬಿಗ್ ಶಾಕ್: ಜಾಲತಾಣದಲ್ಲಿ ಫೋಟೋ ನೋಡಿ ಮನೆ...

ಕುಟುಂಬ ಸಮೇತ ಪುಣ್ಯಕ್ಷೇತ್ರಗಳ ಪ್ರವಾಸ ಮುಗಿಸಿ ಬಂದವರಿಗೆ ಬಿಗ್ ಶಾಕ್: ಜಾಲತಾಣದಲ್ಲಿ ಫೋಟೋ ನೋಡಿ ಮನೆ ದೋಚಿದ ಕಳ್ಳರು

ಬೆಂಗಳೂರು: ಖಾಸಗಿ ವಿದ್ಯಾಸಂಸ್ಥೆಯ ಮಾಲೀಕನ ಮನೆಗೆ ನುಗ್ಗಿದ ಕಳ್ಳರು 1.50 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಆನೇಕಲ್ ತಾಲೂಕಿನ ಸೂರ್ಯಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇಡೀ ಕುಟುಂಬದವರು ಪುಣ್ಯಕ್ಷೇತ್ರಗಳಿಗೆ ಪ್ರವಾಸಕ್ಕೆ ಹೋಗಿ ಬಂದ ನಂತರ ಘಟನೆ ಬೆಳಕಿಗೆ ಬಂದಿದೆ. ಖಾಸಗಿ ವಿದ್ಯಾ ಸಂಸ್ಥೆಯ ಮಾಲೀಕ ಶಶಿಧರ್ ಅವರ ಮನೆಯಲ್ಲಿ ನಗದು ಚಿನ್ನಾಭರಣ ದೋಚಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀಧರ್ ಕುಟುಂಬ ಸಮೇತರಾಗಿ ಪುಣ್ಯ ಕ್ಷೇತ್ರಗಳ ದರ್ಶನಕ್ಕೆ ತೆರಳಿದ್ದು, ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದರು. ಅವರು ಪ್ರವಾಸಕ್ಕೆ ಹೋಗಿರುವುದನ್ನು ಅರಿತ ಕಳ್ಳರ ತಂಡ ಮನೆಯ ಬಾಗಿಲು ಮುರಿದು ನಗದು ಚಿನ್ನಾಭರಣ ದೋಚಿದ್ದು, ಸಿಸಿ ಕ್ಯಾಮೆರಾ ಡಿವಿಆರ್ ಕೂಡ ದೋಚಲಾಗಿದೆ.

ಒಂದು ಕೆಜಿಗೂ ಅಧಿಕ ಚಿನ್ನಾಭರಣ, ಆರು ಕೆಜಿ ಬೆಳ್ಳಿ, 53 ಲಕ್ಷ ನಗದು ಲಾಕರ್ ಸಮೇತ ದೋಚಲಾಗಿದೆ. ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular