ಮೈಸೂರಿನಲ್ಲಿ ಘೋರ ದುರಂತ : ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ದಾರುಣ ಸಾವು

ಮೈಸೂರು: ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಸರಗೂರು ಸಮೀಪದ ಚಂಗೌಡನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಸರಗೂರು ತಾಲೂಕಿನ ಚಂಗೌಡನಹಳ್ಳಿಯ ಮಹಮ್ಮದ್ ಕಪಿಲ್(42), ಶಾವರ ಭಾನು(38) ಪುತ್ರಿ ಶಾಹೀರಾ ಭಾನು(17) ಮೃತಪಟ್ಟವರು ಎಂದು ಹೇಳಲಾಗಿದೆ. ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋದ ತಂದೆ, ತಾಯಿ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಅಜ್ಜಿಯ ತಿಥಿ ಕಾರ್ಯಕ್ಕಾಗಿ ಸರಗೂರಿನ ತಮ್ಮ ಸ್ವಗ್ರಾಮಕ್ಕೆ ಆಗಮಿಸಿದ್ದ ಅವರು ಕಾರ್ಯಕ್ರಮ ಮುಗಿದ ನಂತರ ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋದಾಗ ಘಟನೆ ನಡೆದಿದೆ. ಕಾಲು ಜಾರಿ ಬಿದ್ದ ಮಗಳನ್ನು ರಕ್ಷಿಸಲು ತಾಯಿ ಶಾವರ ಭಾನು ಧಾವಿಸಿದ್ದಾರೆ. ಇಬ್ಬರೂ ಮುಳುಗುವುದನ್ನು ಕಂಡ ಕಪಿಲ್ ರಕ್ಷಿಸಲು ಹೋಗಿದ್ದು, ಮೂವರು ನೀರಿನಲ್ಲಿ ಮುಳುಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read