HomeLatest Newsಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್

ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್

ಬಾಗಲಕೋಟೆ: ಬಡತನದಿಂದ ಶಿಕ್ಷಣ ಪೂರೈಸಲಾಗದ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಗೆ ಭಾರತೀಯ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ರಿಷಬ್ ಪಂತ್ ನೆರವು ನೀಡಿದ್ದಾರೆ.

ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಚೌಡಾಪುರ ರಬಕವಿ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿನಿ ಜ್ಯೋತಿ ಕಣಬೂರ ಅವರಿಗೆ ರಿಷಬ್ ಪಂತ್ ಸಹಾಯಹಸ್ತ ಚಾಚಿದ್ದಾರೆ.

ಕಡುಬಡತನದಲ್ಲಿರುವ ಜ್ಯೋತಿ ದ್ವಿತೀಯ ಪಿಯುಸಿಯಲ್ಲಿ ಶೇ. 83 ರಷ್ಟು ಅಂಕಗಳಿಸಿದ್ದಾರೆ. ಅವರ ತಂದೆ ತೀರ್ಥಯ್ಯ ಗ್ರಾಮದಲ್ಲಿ ಟೀ ಅಂಗಡಿ ನಡೆಸುತ್ತಿದ್ದಾರೆ. ಜಮಖಂಡಿಯ ಬಿ.ಎಲ್.ಡಿ.ಇ. ಕಾಲೇಜಿನಲ್ಲಿ ಬಿಸಿಎ ಪ್ರವೇಶಕ್ಕೆ ಜ್ಯೋತಿಗೆ 40,000 ರೂ. ಶುಲ್ಕ ಕಟ್ಟಬೇಕಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಗ್ರಾಮದ ಗುತ್ತಿಗೆದಾರ ಅನಿಲ್ ಹುಣಶಿಕಟ್ಟೆ ಅವರು ರಿಷಬ್ ಪಂತ್ ಆತ್ಮೀಯರಾದ ಸ್ನೇಹಿತ ಅಕ್ಷಯ್ ನಾಯಕ್ ಅವರನ್ನು ಸಂಪರ್ಕಿಸಿದ್ದಾರೆ. ಅಕ್ಷಯ್ ಅವರು ಈ ವಿಷಯವನ್ನು ರಿಷಬ್ ಗಮನಕ್ಕೆ ತಂದಿದ್ದು, ತಕ್ಷಣವೇ ಬಿಸಿಎ ಮೊದಲ ಸೆಮಿಸ್ಟರ್ 40,000 ರೂ. ಶುಲ್ಕವನ್ನು ಪಾವತಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಸರು, ಊರು ಗೊತ್ತಿಲ್ಲದ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನೆರವಾಗುವ ಮೂಲಕ ರಿಷಬ್ ಪಂತ್ ಮಾನವೀಯತೆ ಮೆರೆದಿದ್ದಾರೆ. ಅವರ ಉಪಕಾರ ಮರೆಯುವುದಿಲ್ಲ. ನಾನು ಚೆನ್ನಾಗಿ ಓದಿ ಉತ್ತಮ ಅಂಕ ಗಳಿಸುತ್ತೇನೆ. ನೆರವು ನೀಡಿದ ಅವರಿಗೆ ಧನ್ಯವಾದಗಳು ಎಂದು ಜ್ಯೋತಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular