BREAKING : ಪಂಜಾಬಿ ಖ್ಯಾತ ಹಾಸ್ಯನಟ ‘ಜಸ್ವಿಂದರ್ ಭಲ್ಲಾ’ ನಿಧನ |Jaswinder Bhalla Passes Away

ಪಂಜಾಬಿ ಚಿತ್ರರಂಗದ ಖ್ಯಾತ ಹಾಸ್ಯನಟ ಜಸ್ವಿಂದರ್ ಭಲ್ಲಾ ಅವರು ಶುಕ್ರವಾರ (ಆಗಸ್ಟ್ 22) ಬೆಳಿಗ್ಗೆ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ 65 ವರ್ಷ ವಯಸ್ಸಾಗಿತ್ತು ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಹಲವಾರು ಪಂಜಾಬಿ ಮಾಧ್ಯಮ ವರದಿಗಳ ಪ್ರಕಾರ, ಅವರ ಅಂತ್ಯಕ್ರಿಯೆ ಆಗಸ್ಟ್ 23 ರಂದು ಮಧ್ಯಾಹ್ನ 12 ಗಂಟೆಗೆ ಮೊಹಾಲಿಯ ಬಲೋಂಗಿ ಸ್ಮಶಾನದಲ್ಲಿ ನಡೆಯಲಿದೆ. ಅಭಿಮಾನಿಗಳು ಮತ್ತು ಸಹ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿದೆ. ತಮ್ಮ ವಿಶಿಷ್ಟ ಹಾಸ್ಯ ಶೈಲಿ ಮತ್ತು ಸ್ಮರಣೀಯ ಪಾತ್ರಗಳಿಂದ ಪ್ರಸಿದ್ಧರಾದ ಭಲ್ಲಾ, ಪಂಜಾಬಿ ಮನರಂಜನಾ ಉದ್ಯಮದಲ್ಲಿ ತಮ್ಮ ಛಾಪು ಮೂಡಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read