HomeKarnataka15 ಕೋಟಿ ರೂ. ವೆಚ್ಚದಲ್ಲಿ ಖ್ಯಾತ ಗಾಯಕಿ ಎಸ್. ಜಾನಕಿ ಸ್ಮಾರಕ ನಿರ್ಮಾಣ

15 ಕೋಟಿ ರೂ. ವೆಚ್ಚದಲ್ಲಿ ಖ್ಯಾತ ಗಾಯಕಿ ಎಸ್. ಜಾನಕಿ ಸ್ಮಾರಕ ನಿರ್ಮಾಣ

ಮೈಸೂರು: 10ರಿಂದ 15 ಕೋಟಿ ರೂಪಾಯಿ ವೆಚ್ಚದಲ್ಲಿ ಖ್ಯಾತ ಗಾಯಕಿ ಎಸ್. ಜಾನಕಿ ಅವರ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ತಿಳಿಸಿದ್ದಾರೆ.

ಮೈಸೂರಿನಲ್ಲಿ ಬುಧವಾರ ಎಸ್. ಜಾನಕಿ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಜಾನಕಿ ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಾನಕಿ ಅವರ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಜಾನಕಿ ಧ್ಯಾನ ಮಂಟಪ ನಿರ್ಮಾಣ ಮಾಡಲಾಗುವುದು. ಇದರೊಂದಿಗೆ ಕಲ್ಯಾಣ ಮಂದಿರ ನಿರ್ಮಿಸಲಾಗುವುದು. ಜಾನಕಿ ಅವರಿಗೆ ಶ್ರೀಕೃಷ್ಣ ದೇವರ ಬಗ್ಗೆ ಅಪಾರ ನಂಬಿಕೆ ಇತ್ತು. ಅವರ ಅಂತಿಮ ಕ್ಷಣದಲ್ಲಿ ಅವರ ಕೈಯಲ್ಲಿ ಶ್ರೀ ಕೃಷ್ಣನ ವಿಗ್ರಹವಿತ್ತು. ಹೀಗಾಗಿ ಕಲ್ಯಾಣ ಮಂಟಪಕ್ಕೆ ಶ್ರೀಕೃಷ್ಣ ಕಲ್ಯಾಣ ಮಂಟಪ ಎಂದು ಹೆಸರು ಇಡಲಾಗುವುದು. ಇದರೊಂದಿಗೆ ಜಾನಕಿ ಅವರ ಅಧ್ಯಯನ ಪೀಠ ಸ್ಥಾಪಿಸಲಾಗುವುದು. ಒಂದೆರಡು ವರ್ಷಗಳಲ್ಲಿ ಈ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಹಂಸಲೇಖ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾನಕಿ ಅವರ ನೆನಪಿನಲ್ಲಿ ಮೈಸೂರಿನಲ್ಲಿ ಕಾರ್ಯಕ್ರಮ ನಡೆಸಬೇಕು ಎಂದು ನಿರ್ಧರಿಸಿದಾಗ 40 ಗಾಯಕರು ಮುಂದೆ ಬಂದರು. ಇಂದು ಅರ್ಥಪೂರ್ಣ ಕಾರ್ಯಕ್ರಮ ನಡೆದಿದೆ. ಜಾನಕಿ ಅವರದ್ದು ಪರಿಪೂರ್ಣ ಜೀವನ. ಪರಿಪೂರ್ಣ ಗಾಯನ. ಅವರು ಗಾಯನದ ಮೂಲಕ ಚಿರವಾಗಿದ್ದಾರೆ ಎಂದು ಹಂಸಲೇಖ ತಿಳಿಸಿದ್ದಾರೆ.

ಜಾನಕಿ ಅವರು ತಮ್ಮ ಜೀವನದ ಕೊನೆಯ ದಿನಗಳನ್ನು ಮೈಸೂರಿನಲ್ಲಿ ಕಳೆಯುವ ಆಸೆ ಹೊಂದಿದ್ದರು. ಕಣಿಯನಹುಂಡಿಯಲ್ಲಿ ಜಾನಕಿಯವರ ಸ್ಮರಣಾರ್ಥ ಜಾನಕಿ ಧ್ಯಾನ ಮಂಟಪ, ಶ್ರೀಕೃಷ್ಣ ಕಲ್ಯಾಣ ಮಂಟಪ, ಜಾನಕಿ ಅಧ್ಯಯನ ಪೀಠ ನಿರ್ಮಿಸಲಾಗುವುದು. ಸುಮಾರು 10 ರಿಂದ 15 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಮೂರು ಮಹತ್ವದ ಯೋಜನೆಗಳನ್ನು ಒಂದು ಅಥವಾ ಎರಡು ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿಯಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular