HomeKarnatakaBREAKING : ರಂಗಭೂಮಿ ಕಲಾವಿದೆ, ಹಿರಿಯ ನಟಿ ‘ಮಮತಾ ಗುಡೂರ’ ಇನ್ನಿಲ್ಲ

BREAKING : ರಂಗಭೂಮಿ ಕಲಾವಿದೆ, ಹಿರಿಯ ನಟಿ ‘ಮಮತಾ ಗುಡೂರ’ ಇನ್ನಿಲ್ಲ

ಬಾಗಲಕೋಟೆ : ಖ್ಯಾತ ರಂಗಭೂಮಿ ಕಲಾವಿದೆ ‘ಮಮತಾ ಗುಡೂರ’ (75) ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಮನೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಬೆಳಗ್ಗೆ 7 ಗಂಟೆಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಒಟ್ಟು 5 ಸಾವಿರಕ್ಕೂ ಹೆಚ್ಚು ನಾಟಕ ಹಾಗೂ 25 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮಮತಾ ಬಣ್ಣ ಹಚ್ಚಿದ್ದರು. ಕನ್ನಡದ ಹಲವು ದಿಗ್ಗಜ ನಟರೊಂದಿಗೆ ತೆರೆ ಹಂಚಿಕೊಂಡಿದ್ದರು. ಇವರ ಕಲಾಸೇವೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಕೂಡ ನೀಡಲಾಗಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗುಡೂರು ಗ್ರಾಮದಲ್ಲಿ ಮುಸ್ಲಿಂ ಧರ್ಮದ ಪ್ರಕಾರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular