HomeLatest NewsBREAKING : ಬೆಳಗಾವಿಯಲ್ಲಿ 'RCB' ವಿಜಯೋತ್ಸವದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಅಭಿಮಾನಿ ಸಾವು !

BREAKING : ಬೆಳಗಾವಿಯಲ್ಲಿ ‘RCB’ ವಿಜಯೋತ್ಸವದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಅಭಿಮಾನಿ ಸಾವು !

ಬೆಳಗಾವಿ : ಆರ್ ಸಿಬಿ ಐಪಿಎಲ್ ಟ್ರೋಫಿ ಗೆದ್ದ ಖುಷಿಗೆ ಸಂಭ್ರಮಾಚರಣೆ ಮಾಡುತ್ತಿದ್ದ ಅಭಿಮಾನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರ್ ಸಿಬಿ ಐಪಿಎಲ್ ಟ್ರೋಫಿ ಗೆದ್ದ ಖುಷಿಗೆ ಸಂಭ್ರಮಾಚರಣೆ ಮಾಡುತ್ತಿದ್ದ ಅಭಿಮಾನಿ ಮಂಜುನಾಥ್ ಕುಂಬಾರ (25) ಮೃತಪಟ್ಟಿದ್ದಾನೆ. ಕುಣಿದು ಕುಪ್ಪಳಿಸುತ್ತಿದ್ದಾಗ ಏಕಾಏಕಿ ಹೃದಯಾಘಾತವಾಗಿದೆ. ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ.

ಆರ್ ಸಿಬಿ ಟ್ರೋಫಿ ಗೆದ್ದಿದ್ದಕ್ಕೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಮನೆ ಮಾಡಿದೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಅಭಿಮಾನಿಗಳು ಕುಣಿದು ಕುಪ್ಪಳಿಸಿ ವಿಜಯೋತ್ಸವ ಆಚರಿಸಿದ್ದಾರೆ. 18 ವರ್ಷದ ಆರ್ ಸಿಬಿ ಕನಸು ನನಸಾಗಿದ್ದು, ರಾಜ್ಯದ ಹಲವು ಕಡೆ ಅಭಿಮಾನಿಗಳು ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular