HomeLatest Newsಹಿಂದೂ ಮಹಾಸಭಾ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ನಟ ದರ್ಶನ್ ಫೋಟೋ ಹಿಡಿದು ಅಭಿಮಾನಿಗಳ ‘ಡಿ ಬಾಸ್’...

ಹಿಂದೂ ಮಹಾಸಭಾ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ನಟ ದರ್ಶನ್ ಫೋಟೋ ಹಿಡಿದು ಅಭಿಮಾನಿಗಳ ‘ಡಿ ಬಾಸ್’ ಘೋಷಣೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಇಂದು ಹಿಂದೂ ಮಹಾಸಭಾ ಗಣೇಶ ವಿಸರ್ಜನಾ ಪೂರ್ವ ಮೆರವಣಿಗೆ ವೈಭವದಿಂದ ನಡೆದಿದೆ.

ಅಪಾರ ಸಂಖ್ಯೆಯಲ್ಲಿ ಜನ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದ್ದಾರೆ. ಇದೇ ವೇಳೆ ನಟ ದರ್ಶನ್ ಅಭಿಮಾನಿಗಳು ದರ್ಶನ್ ಅವರ ಫೋಟೋ ಹಿಡಿದು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಶಿವಮೊಗ್ಗದ ನೆಹರು ರಸ್ತೆಯಲ್ಲಿ ಗಣಪತಿ ಮೆರವಣಿಗೆ ಸಾಗುವ ಮೊದಲು ದರ್ಶನ್ ಅಭಿಮಾನಿಗಳು ನೆಚ್ಚಿನ ನಟನ ಫೋಟೋ ಹಿಡಿದು ಡಿ ಬಾಸ್ ಎಂದು ಘೋಷಣೆ ಕೂಗಿದ್ದಾರೆ. ದರ್ಶನ್ ಫೋಟೋ ಎತ್ತಿಕೊಂಡು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕರು ದರ್ಶನ್ ಪರ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ. ದರ್ಶನ್ ಗೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular