ಬೆಂಗಳೂರು: ಭಾನುವಾರ ಬೆಂಗಳೂರಿಗೆ ಖ್ಯಾತ ನಟ ಜೂನಿಯರ್ ಎನ್.ಟಿ.ಆರ್ ಭೇಟಿ ನೀಡಿದ್ದು, ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಮಹದೇವಪುರದಲ್ಲಿ ಕಿಮ್ಸ್ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಹಾಸ್ಪಿಟಲ್ ಮುಂದೆ ಭಾರಿ ಸಂಖ್ಯೆಯ ಜನ ಸೇರಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಕಿಮ್ಸ್ ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೆ ಜೂನಿಯರ್ ಎನ್.ಟಿ.ಆರ್. ಆಗಮಿಸುತ್ತಿದ್ದಂತೆ ಅವರ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಅವರ ಆಗಮನದ ಬಗ್ಗೆ ಯಾವುದೇ ಪ್ರಚಾರ ಮಾಡದಿದ್ದರೂ, ಆಸ್ಪತ್ರೆ ಬಳಿ ಭಾರಿ ಜನಸಮೂಹ ಸೇರಿದೆ. ನೆಚ್ಚಿನ ನಟನ ನೋಡಲು ಅಭಿಮಾನಿಗಳು ಆಸ್ಪತ್ರೆ ಹೊರಗೆ ಜಮಾಯಿಸಿದ್ದರು. ಪರಿಸ್ಥಿತಿಯನ್ನು ನಿಭಾಯಿಸುವುದು ಕಷ್ಟವಾಗಿ ಪೊಲೀಸರು ಮಧ್ಯಪ್ರವೇಶಿಸಬೇಕಾಯಿತು.
ಉತ್ಸಾಹಗೊಂಡ ಅಭಿಮಾನಿಗಳನ್ನು ನಿಯಂತ್ರಿಸಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಲಘು ಲಾಠಿ ಚಾರ್ಜ್ ನಡೆಸಲಾಗಿದೆ. ಅವ್ಯವಸ್ಥೆಯ ನಡುವೆಯೂ, ಎನ್.ಟಿ.ಆರ್. ಅಭಿಮಾನಿಗಳ ಎದುರು ಕಾಣಿಸಿಕೊಂಡು ಆಸ್ಪತ್ರೆ ಉದ್ಘಾಟಿಸಿ ತೆರಳಿದ್ದಾರೆ.

