ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಆಗರದಹಳ್ಳಿಯಲ್ಲಿ ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಡಿದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ.
ಆಗರದಹಳ್ಳಿ ಗ್ರಾಮದ ನಿಂಗರಾಜು(33) ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಗ್ರಾಮದ ಮಂಜಪ್ಪ ಎಂಬುವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಿಂಗರಾಜು ಅವರಿಗೆ ಹಾವು ಕಚ್ಚಿದೆ. ಕೂಡಲೇ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಂಗರಾಜು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.