HomeLatest Newsಅಡಕೆ ಗೊನೆ ಕೊಯ್ಯುವಾಗ ವಿದ್ಯುತ್ ಪ್ರವಹಿಸಿ ಕೃಷಿ ಕಾರ್ಮಿಕ ಸ್ಥಳದಲ್ಲೇ ಸಾವು

ಅಡಕೆ ಗೊನೆ ಕೊಯ್ಯುವಾಗ ವಿದ್ಯುತ್ ಪ್ರವಹಿಸಿ ಕೃಷಿ ಕಾರ್ಮಿಕ ಸ್ಥಳದಲ್ಲೇ ಸಾವು

ಶಿವಮೊಗ್ಗ: ಅಡಕೆ ಗೊನೆ ಕೊಯ್ಯುವಾಗ ವಿದ್ಯುತ್ ಪ್ರವಹಿಸಿ ಕೃಷಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬಸವಾನಿ ಸಮೀಪದ ಲಕ್ಷ್ಮಿಪುರ ಗ್ರಾಮದ ಬಳಿ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ದೋರಗಲ್ಲು ಗ್ರಾಮದ ಸತೀಶ್(50) ಮೃತಪಟ್ಟವರು. ಅಡಕೆ ಗೊನೆ ಕೊಯ್ಯುವಾಗ ಆಕಸ್ಮಿಕವಾಗಿ ಕೊನೆಯ ದೋಟಿ ವಿದ್ಯುತ್ ಪೂರೈಕೆ ಮಾರ್ಗದ ತಂತಿಗೆ ತಗಲಿ ಸತೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರೈತ ಸುಂದರೇಶ್ ಅವರಿಗೆ ಸೇರಿದ ಅಡಕೆ ತೋಟದಲ್ಲಿ ಘಟನೆ ನಡೆದಿದೆ. ಮೃತ ಸತೀಶ್ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular