ಒತ್ತುವರಿ ತೆರವು ವಿರೋಧಿ ಪ್ರತಿಭಟನೆ ವೇಳೆ ಕೃಷಿಕ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕು ಲಕ್ಕವಳ್ಳಿ ವಲಯ ಅರಣ್ಯ ಅಧಿಕಾರಿ ಕಚೇರಿ ಮುಂದೆ ರೈತರ ಹಿತರಕ್ಷಣ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಕುಸಿದು ಬಿದ್ದ ಕೃಷಿಕ ಸಾವನ್ನಪ್ಪಿದ್ದಾರೆ.

ಲಕ್ಕವಳ್ಳಿ ಹೋಬಳಿಯ ಗುರುಪುರ ಗ್ರಾಮದ ಕೃಷಿಕ ಮಣಿ(28) ಮೃತಪಟ್ಟವರು. ಅರಣ್ಯ ಇಲಾಖೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ರೈತರು ಮತ್ತು ವಿವಿಧ ಪಕ್ಷಗಳ ಮುಖಂಡರು ಲಕ್ಕವಳ್ಳಿ ಅರಣ್ಯಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಕೈಗೊಂಡಿದ್ದರು.

ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮನವಿ ಪತ್ರ ಸ್ವೀಕರಿಸಿ ಮಾತನಾಡುವಾಗ ಮಣಿ ಕುಸಿದು ಬಿದ್ದಿದ್ದಾರೆ. ಅವರಿಗೆ ಲಕ್ಕವಳ್ಳಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಮಣಿಯವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read