ಹೊಸಪೇಟೆ: ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಹೊರವಲಯದ ಜಮೀನಿನಲ್ಲಿ ಹೆಜ್ಜೇನು ದಾಳಿಗೆ ರೈತರೊಬ್ಬರು ಮೃತಪಟ್ಟಿದ್ದಾರೆ.
ತಳವಾರ ಹನುಮಂತಪ್ಪ(70) ಮೃತಪಟ್ಟ ರೈತ ಎಂದು ಹೇಳಲಾಗಿದೆ. ಮೇ 19 ರಂದು ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಅವರ ಮೇಲೆ ಹೆಜ್ಜೇನು ಹುಳಗಳು ದಾಳಿ ಮಾಡಿವೆ. ಅವರನ್ನು ಕೊಪ್ಪಳ ಮತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

