HomeKarnatakaಕೀಟನಾಶಕ ಸಿಂಪಡಿಸುವಾಗ ವಿಷ ದೇಹಕ್ಕೆ ಸೇರಿ ಕೃಷಿಕ ಸಾವು

ಕೀಟನಾಶಕ ಸಿಂಪಡಿಸುವಾಗ ವಿಷ ದೇಹಕ್ಕೆ ಸೇರಿ ಕೃಷಿಕ ಸಾವು

ಶಿವಮೊಗ್ಗ: ಬೆಳೆಗೆ ಕೀಟನಾಶಕ ಸಿಂಪಡಿಸುವ ವೇಳೆ ದೇಹಕ್ಕೆ ವಿಷ ಸೇರಿ ಕೃಷಿಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಡೇನಕೊಪ್ಪದಲ್ಲಿ ನಡೆದಿದೆ.

ಗಣಪತಿ(50) ಮೃತಪಟ್ಟವರು. ತಮ್ಮ ಜಮೀನಿನಲ್ಲಿ ಬೆಳೆದಿದ್ದ ಅನಾನಸ್ ಬೆಳೆಗೆ ಕೀಟನಾಶಕ ಸಿಂಪಡಿಸಿದ್ದ ಗಣಪತಿ ಅವರ ದೇಹಕ್ಕೆ ವಿಷ ಸೇರಿದ್ದರಿಂದ ಅಲರ್ಜಿ ಉಂಟಾಗಿ ಚಿಕಿತ್ಸೆ ಪಡೆದಿದ್ದಾರೆ. ನಂತರ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular