HomeKarnatakaSHOCKING: ಜಮೀನಿನಲ್ಲೇ ವಿದ್ಯುತ್ ತಂತಿ ಹಿಡಿದುಕೊಂಡು ರೈತ ಆತ್ಮಹತ್ಯೆ

SHOCKING: ಜಮೀನಿನಲ್ಲೇ ವಿದ್ಯುತ್ ತಂತಿ ಹಿಡಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಸಾಲ ಬಾಧೆ ತಾಳಲಾರದೆ ವಿದ್ಯುತ್ ತಂತಿ ಹಿಡಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಿಣ್ಣಿಸುಲ್ತಾನ ಗ್ರಾಮದಲ್ಲಿ ಶನಿವಾರ ನಡೆದಿದೆ.

ಹಣಮಂತರಾಯ ಶರಣಪ್ಪ ಹೌಶೆಟ್ಟಿ(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಆರು ಎಕರೆ ಜಮೀನು ಹೊಂದಿರುವ ಹಣಮಂತರಾಯ ತಡಕಲ್ ಕೆಜೆಬಿ ಬ್ಯಾಂಕ್, ಸ್ಥಳೀಯ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಮತ್ತು ಖಾಸಗಿಯವರಿಂದ ಲಕ್ಷಾಂತರ ರೂ. ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲ ಭಾದೆ ತಾಳದೆ ಅವರು ಜಮೀನಿನಲ್ಲಿದ್ದ ವಿದ್ಯುತ್ ಟಿಸಿ ತಂತಿ ಹಿಡಿದುಕೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular