HomeKarnatakaಕಬ್ಬಿನ ಗದ್ದೆಯಲ್ಲಿ ಕೆಲಸದ ವೇಳೆ ಕರಡಿ ದಾಳಿಗೆ ರೈತ ಬಲಿ

ಕಬ್ಬಿನ ಗದ್ದೆಯಲ್ಲಿ ಕೆಲಸದ ವೇಳೆ ಕರಡಿ ದಾಳಿಗೆ ರೈತ ಬಲಿ

ಧಾರವಾಡ: ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುವ ವೇಳೆ ಕರಡಿ ದಾಳಿಯಿಂದ ರೈತ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಬೆಂಡಲಗಟ್ಟಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಬೆಂಡಲಗಟ್ಟಿ ಗ್ರಾಮದ ಶಂಕ್ರಪ್ಪ ಪರಸಪ್ಪ ಲಮಾಣಿ(49) ಮೃತಪಟ್ಟವರು. ಶನಿವಾರ ಕಬ್ಬಿನ ಗದ್ದೆಯಲ್ಲಿ ಕೆಲಸಕ್ಕೆ ತೆರಳಿದ್ದ ಅವರು ಕೆಲಸ ಮಾಡುವ ವೇಳೆ ಏಕಾಏಕಿ ಕರಡಿ ದಾಳಿ ಮಾಡಿದೆ. ಕರಡಿ ದಾಳಿಯಿಂದ ಶಂಕ್ರಪ್ಪ ಕಿರುಚಾಡಿದಾಗ ಸುತ್ತಮುತ್ತಲಿನ ಹೊಲಗಳಲ್ಲಿದ್ದ ರೈತರು ರಕ್ಷಣೆಗೆ ಧಾವಿಸಿ ಬಂದಿದ್ದಾರೆ. ಈ ವೇಳೆ ಕರಡಿ ಪರಾರಿಯಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶಂಕ್ರಪ್ಪ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾರೆ.

ಮೃತನ ಕುಟುಂಬಕ್ಕೆ ಸರ್ಕಾರದ ನಿಯಮಾನುಸಾರ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಡಿಎಫ್ಒ ಅಲೀಂ ಸಿದ್ದಿಖಿ ತಿಳಿಸಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular