ಚಾಮರಾಜನಗರ: ಕಾಡಾನೆ ದಾಳಿಗೆ ರೈತರೊಬ್ಬರು ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ನಡೆದಿದೆ.
ನಂಜಪ್ಪ ಸಾವನ್ನಪ್ಪಿದ್ದಾರೆ(50) ಮೃತಪಟ್ಟ ರೈತ ಎಂದು ಹೇಳಲಾಗಿದೆ. ಜಮೀನಿಗೆ ತೆರಳಿದ ವೇಳೆ ರೈತ ನಂಜಪ್ಪ ಅವರ ಮೇಲೆ ಕಾಡಾನೆ ದಾಳಿ ಮಾಡಿದೆ. ಕಾಡಾನೆ ದಾಳಿಯಿಂದ ಸ್ಥಳದಲ್ಲಿಯೇ ರೈತ ನಂಜಪ್ಪ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ಕಾಡಾನೆಗಳ ದಾಳಿಯನ್ನು ನಿಯಂತ್ರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸಮರ್ಪಕ ಆನೆ ಕಂದಕಗಳು, ಸೋಲಾರ್ ಬೇಲಿ ನಿರ್ಮಾಣ ಮಾಡಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.