HomeKarnatakaBIG NEWS: ರೈತರು, ಇತರರ ಆಸ್ತಿ ವಕ್ಫ್ ಹೆಸರಿಗೆ ಖಾತೆ ಮಾಡಿಸುವ ಎಲ್ಲಾ ನೋಟಿಸ್ ತಕ್ಷಣ...

BIG NEWS: ರೈತರು, ಇತರರ ಆಸ್ತಿ ವಕ್ಫ್ ಹೆಸರಿಗೆ ಖಾತೆ ಮಾಡಿಸುವ ಎಲ್ಲಾ ನೋಟಿಸ್ ತಕ್ಷಣ ಹಿಂಪಡೆಯಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಕೆಲವು ರೈತರು ಮತ್ತು ಇತರೆ ಆಸ್ತಿಗಳನ್ನು ವಕ್ಪ್ ಹೆಸರಿಗೆ ಖಾತೆ ಮಾಡಿಸುವ ಸಂಬಂಧ ನೀಡಿರುವ ಎಲ್ಲಾ ನೋಟಿಸ್ ಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಸೂಚಿಸಿ ಕಂದಾಯ ಇಲಾಖೆಯು ಎಲ್ಲಾ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದೆ.

ವಕ್ಪ್ ಹೆಸರಿಗೆ ಖಾತೆ ಬದಲಾವಣೆ ಕುರಿತಾದ ಯಾವುದೇ ಕಚೇರಿ ಅಥವಾ ಪ್ರಾಧಿಕಾರದಿಂದ ನೀಡಲಾದ ನಿರ್ದೇಶನಗಳನ್ನು ತಕ್ಷಣವೇ ಹಿಂಪಡೆದುಕೊಳ್ಳಬೇಕು. ವಕ್ಪ್ ಆಸ್ತಿ ಕುರಿತ ಮ್ಯುಟೇಷನ್ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸದರಿ ಜಮೀನುಗಳಲ್ಲಿ ಕೃಷಿ ಮಾಡುತ್ತಿರುವ ರೈತರ ವಿರುದ್ಧ ಯಾವುದೇ ಕ್ರಮ ಜರುಗಿಸಬಾರದು ಎಂದು ಕಂದಾಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಾ. ಬಿ. ಉದಯ ಕುಮಾರ್ ಶೆಟ್ಟಿ ಆದೇಶದಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular