HomeLatest NewsBIG NEWS: ಆತ್ಮಹತ್ಯೆಗೆ ಶರಣಾದ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಸಚಿವ ಚಲುವರಾಯಸ್ವಾಮಿ

BIG NEWS: ಆತ್ಮಹತ್ಯೆಗೆ ಶರಣಾದ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಮಂಡ್ಯದ ಡಿಸಿ ಕಚೇರಿ ಬಳಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ರೈತನ ಕುಟುಂಬಕ್ಕೆ ರಾಜ್ಯ ಸರ್ಕಾರ ೫ ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಕೃಷಿ ಸಚಿವ ಚಲುವರಾಯಸ್ವಾಮಿ, ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತ ಮಂಜೇಗೌಡ ಅವರ ಅಂತಿಮ ದರ್ಶನ ಪಡೆದರು. ಬಳಿಕ ಕುಟೂಂಬದವರಿಗೆ ಸಾಂತ್ವನ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮಾತನಾಡಿದ ಸಚಿವರು, ಮೃತ ರೈತನ ಕುಟುಂಬಕ್ಕೆ ೫ ಲಕ್ಷ ಪರಿಹಾರ ನೀಡಲಾಗುವುದು ಎಂದರು. ಮಂಜೇಗೌಡ ಅವರ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಜಂಟಿ ಸರ್ವೆ ನಡೆಸಲಾಗುವುದು. ಜಾಗವೇನಾದರೂ ಅರಣ್ಯ ಇಲಾಖೆ ಒಡೆತನಕ್ಕೆ ಸೇರಿದ್ದರೆ ಆಜಾಗವನ್ನು ಕುಟುಂಬದವರಿಗೆ ನೀಡುವುದಾಗಿ ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular