ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕ್ವಿಂಟಲ್ ಗೆ 6760 ರೂ. ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿಸಲಾಗುವುದು. ಬಾಗಲಕೋಟೆ ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆದ ರೈತರು ಸದುಪಯೋಗ ಪಡೆದುಕೊಳ್ಳಬಹುದು.

ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಕ್ವಿಂಟಲ್ ಗೆ 6760 ರೂಪಾಯಿ ದರದಲ್ಲಿ ಖರೀದಿಸಲಾಗುವುದು. ಪ್ರತಿ ಎಕರೆಗೆ 3 ಕ್ವಿಂಟಲ್ ನಂತೆ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸಲಾಗುವುದು.

ಅಕ್ಟೋಬರ್ 3ರಿಂದ 45 ದಿನಗಳ ವರೆಗೆ ಖರೀದಿ ಕೇಂದ್ರಗಳಲ್ಲಿ ರೈತರು ನೋಂದಾಯಿಸಿಕೊಳ್ಳಲು ಅವಕಾಶ ಇದೆ. ಬಾಗಲಕೋಟೆಯ ಜಿಲ್ಲೆಯ ವಿವಿಧೆಡೆ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಕೃಷಿ ಇಲಾಖೆಯಿಂದ ನೀಡಿದ FID ನಂಬರ್, ಆಧಾರ್ ಕಾರ್ಡ್, ಪಹಣಿ, ಆಧಾರ್ ಲಿಂಕ್ ಆಗಿರುವ ರಾಷ್ಟ್ರೀಕೃತ ಬ್ಯಾಂಕಿನ ಪಾಸ್ ಬುಕ್ ಪ್ರತಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read