ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ: ಈ ಬಾರಿ ಉತ್ತಮ ಮುಂಗಾರು ಮಳೆ ಮುನ್ಸೂಚನೆ ಹಿನ್ನೆಲೆ ಕೃಷಿ ಸಿದ್ಧತೆಗೆ ಸೂಚನೆ

ಬೆಂಗಳೂರು: ಈ ಬಾರಿ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಮಾನ ಇಲಾಖೆ ವತಿಯಿಂದ ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ಕೃಷಿ ಉತ್ಪಾದನೆ ಮತ್ತು ರೈತರ ಆದಾಯ ಹೆಚ್ಚಳಕ್ಕೆ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಬೆಂಗಳೂರು ಕೃಷಿ ವಿವಿ ತಿಳಿಸಿದೆ.

ಮೇ ಆರಂಭದಲ್ಲಿ ಮಳೆ ಮುನ್ಸೂಚನೆ ಇದ್ದು, ಮಾಗಿ ಉಳುಮೆ ಕೈಗೊಂಡು ಮಣ್ಣು ಮತ್ತು ನೀರು ಸಂರಕ್ಷಣೆಗೆ ಒತ್ತು ನೀಡಬೇಕು. ಮಳೆ ನೀರಿನ ಸಂರಕ್ಷಣೆಗೆ ಬದು ಹಾಗೂ ಕೃಷಿ ಹೊಂಡಗಳನ್ನು ಸರಿಪಡಿಸಬೇಕು. ಎರಡು ಅಥವಾ ಮೂರನೇ ಮಳೆಯ ನಂತರ ಭೂಮಿ ಹದಗೊಳಿಸಿ ಹಸಿರೆಲೆ ಗೊಬ್ಬರ ಹಾಕಬೇಕು. ಸಾವಯವ ಗೊಬ್ಬರಗಳು ಮಣ್ಣಿನ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪಾತ್ರ ವಹಿಸುತ್ತವೆ ಎಂದು ಬೆಂಗಳೂರು ಕೃಷಿ ವಿವಿಯಿಂದ ಮಾಹಿತಿ ನೀಡಲಾಗಿದೆ.

ಮಳೆ ಕೊರತೆ ಮತ್ತು ಅಂತರ್ಜಲ ಕುಸಿತದಿಂದ ಮಣ್ಣಿನಲ್ಲಿ ತೇವಾಂಶದ ಕೊರತೆ ಇದೆ. ಕೆರೆಕಟ್ಟೆ ಹಾಗೂ ಅಣೆಕಟ್ಟೆಗಳಿಗೆ ನೀರು ತುಂಬಿಕೊಳ್ಳುವುದು ವಿಳಂಬವಾಗುವ ಸಾಧ್ಯತೆ ಇದೆ. ಇಂತಹ ಪ್ರದೇಶಗಳಲ್ಲಿ ಬೆಳೆಗಳ ಮಧ್ಯಮಾವಧಿ, ಅಲ್ಪಾವಧಿ ತಳಿಗಳ ಬಿತ್ತನೆ ಅವಶ್ಯಕ. ಬಿತ್ತನೆ ಬೀಜ ಸಿದ್ದ ಮಾಡಿಕೊಳ್ಳಬೇಕು. ಮಳೆಯಾಶ್ರಿತ ಪ್ರದೇಶಗಳಲ್ಲಿ ವಿವಿಧ ಬೆಳೆಗಳ ಸುಧಾರಿತ ತಳಿಗಳ ಬಿತ್ತನೆ ಬೀಜ ಸಂಗ್ರಹಿಸಿಕೊಳ್ಳಬೇಕು ಎಂದು ಹೇಳಲಾಗಿದೆ.

ಏಪ್ರಿಲ್ ಕೊನೆಯ ಅವಧಿಯಲ್ಲಿ ಹತ್ತಿ ಬಿತ್ತಬಹುದು. ಮೇನಲ್ಲಿ ತೊಗರಿ, ಹುರುಳಿ, ಎಳ್ಳು, ಹೆಸರು, ಅವರೆ, ಅಲಸಂದೆ, ಆಲೂಗಡ್ಡೆ ಬಿತ್ತುವುದು ಉತ್ತಮ. ಜೂನ್ ನಲ್ಲಿ ಮುಸುಕಿನ ಜೋಳ, ನೆಲಗಡಲೆ, ರಾಗಿ, ಸಿರಿಧಾನ್ಯ, ಹುರುಳಿ ಮುಂತಾದವುಗಳನ್ನು ಬಿತ್ತನೆ ಮಾಡಬಹುದಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read