BREAKING : ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾರಿಗೆ ಅಡ್ಡಲಾಗಿ ಮಲಗಿ ರೈತರ ಆಕ್ರೋಶ.!

ದಾವಣಗೆರೆ : ದಾವಣಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಹೋದ ರೈತ ಮುಖಂಡರೊಬ್ಬರನ್ನು ಪೊಲೀಸರು ತಡೆದಿದ್ದು, ಇದನ್ನು ಖಂಡಿಸಿದ ರೈತರು ಸಿಎಂ ಅವರ ಕಾರಿಗೆ ಅಡ್ಡಲಾಗಿ ಮಲಗಿ ಪ್ರತಿಭಟಿಸಿದ್ದಾರೆ.

ರೈತ ಮುಖಂಡ ಬಲ್ಲೂರು ರವಿಕುಮಾರ್ ಅವರು, ಪೊಲೀಸರು ತಮ್ಮನ್ನು ಕಾಲಿನಿಂದ ಒದ್ದಿದ್ದಾರೆಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಕ್ಷಣವೇ ಮಧ್ಯಪ್ರವೇಶಿಸಿದ ಸಿಎಂ ಸಿದ್ದರಾಮಯ್ಯ, ರೈತ ಮುಖಂಡನನ್ನು ಸಮಾಧಾನಪಡಿಸಿ, ಮನವಿ ಸ್ವೀಕರಿಸಿದರು. ನಂತರ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read