HomeAgricultureರಾಜ್ಯದ ರೈತರಿಗೆ ಕೃಷಿ ಸಚಿವರಿಂದ ಭರ್ಜರಿ ಗುಡ್ ನ್ಯೂಸ್: ಅನ್ನದಾತರಿಗೆ ಹೊಸ ಯೋಜನೆ ಜಾರಿ

ರಾಜ್ಯದ ರೈತರಿಗೆ ಕೃಷಿ ಸಚಿವರಿಂದ ಭರ್ಜರಿ ಗುಡ್ ನ್ಯೂಸ್: ಅನ್ನದಾತರಿಗೆ ಹೊಸ ಯೋಜನೆ ಜಾರಿ

ಹಾಸನ: ಮೈಸೂರು ಪ್ರಾಂತ್ಯದ ಅತಂತ್ಯ ಪ್ರಸಿದ್ದವಾದ ಹಾಸನಾಂಬ ದೇವಿಯ ಆರ್ಶೀವಾದ ಪ್ರತಿಯೊಬ್ಬರಿಗೂ  ಬೇಕು. ನಾಡಿಗೆ ಒಳ್ಳೆಯ ಮಳೆ ಬೆಳೆಯಾಗಿ ರೈತರಿಗೆ ನೆಮ್ಮದಿ ಸಿಗಲಿ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಇಂದು ಅವರು ಹಾಸನಾಂಬ ದೇವಿ ದರ್ಶನ ಪಡೆದು ನಂತರ ಮಾತನಾಡಿ, ಈ ಬಾರಿ ದೇವಿ ದರ್ಶನಕ್ಕೆ ಕೇವಲ 9 ದಿನ ಮಾತ್ರ ಕಾಲಾವಕಾಶ ಇದ್ದು, ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದರು.

ರೈತರ ಪರವಾಗಿ ಅನೇಕ ದೇವರ ಮೊರೆ ಹೋಗಿ ಪ್ರಾರ್ಥಿಸಿ, ರೈತರಿಗೆ ಸಂಪೂರ್ಣ ಅನುಕೂಲವಾಗಲಿ ಎಂದು ಬೇಡಿಕೊಂಡಿದ್ದೇನೆ, ಈಗ ಬಂದಿರುವ ಬೆಳೆಯು ರೈತರ ಕೈ ಸೇರಿ ರೈತರು ಸಂತೋಷದಿಂದ ಇರಲಿ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತರಿಗೆ ಬಿತ್ತನೆ ಬೀಜ, ಕೃಷಿ ಯಂತ್ರೋಪಕರಣಗಳನ್ನು ರಿಯಾಯಿತಿ ದರದಲ್ಲಿ ಒದಗಿಸಲಾಗುತ್ತಿದೆ. ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು 1 ಲಕ್ಷ ರೈತರಿಗೆ ತರಬೇತಿ ನೀಡಲಾಗುತ್ತಿದೆ. ಮುಂದಿನ ವರ್ಷದಲ್ಲಿ 2 ಲಕ್ಷ ರೈತರಿಗೆ ತರಬೇತಿ ನೀಡುವ ಗುರಿ ಹೋದಲಾಗಿದೆ ಎಂದು ತಿಳಿಸಿದರು.

ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಲು ಹಾಗೂ ಸಂರಕ್ಷಣೆಗಾಗಿ 5 ಲಕ್ಷ ಮಣ್ಣಿನ ಮಾದರಿಯನ್ನು ಪರೀಕ್ಷೆ ಮಾಡಲು ಕ್ರಮವಹಿಸಲಾಗಿದೆ. ಮಣ್ಣಿನ ಪರೀಕ್ಷೆಗೆ ಒತ್ತು ನೀಡುವಂತೆ ಜನರಿಗೆ ಮಾಹಿತಿ ನೀಡಬೇಕು. ರೈತರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲು ಚಿಂತಿಸಲಾಗಿದೆ. 2100 ಕೋಟಿ ರೂ. ಬೆಳೆ ವಿಮೆ ಪಾವತಿಸಲಾಗಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular