ರೈತರಿಗೆ ಗುಡ್ ನ್ಯೂಸ್: 10 ಸಾವಿರ ರೂ. ಸಹಾಯಧನ, ತಾಂತ್ರಿಕತೆ ಸುಧಾರಣೆಗೆ ಹಬ್

ಧಾರವಾಡ: ಈ ವರ್ಷ ಸಿರಿಧಾನ್ಯ ಅಂತರಾಷ್ಟ್ರೀಯ ವರ್ಷವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಸಹಾಯಧನವನ್ನು ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲುರಾಯಸ್ವಾಮಿ ಹೇಳಿದ್ದಾರೆ.

ಶನಿವಾರ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಬ್ಬು ಹಾಗೂ ಇತರ ಬೆಳೆಗಳ ಕಟಾವು ತಾಂತ್ರಿಕತೆ ಸುಧಾರಣೆಗಾಗಿ ಐಟಿ ಹಬ್ ಸ್ಥಾಪನೆಗೆ ರಾಜ್ಯ ಸರ್ಕಾರ 50 ಕೋಟಿ ರೂ. ಮೀಸಲಿಡಲಾಗಿದೆ. ರೈತರಿಗೆ ಬೀಜ, ಗೊಬ್ಬರ, ಕೀಟನಾಶಕಗಳು ಕೊರತೆ ಅಗದಂತೆ ಮುನ್ನಚ್ಚರಿಕೆ ವಹಿಸಿ, ಅಗತ್ಯ ದಾಸ್ತಾನು ಮಾಡಲಾಗಿದೆ ಎಂದು ಹೇಳಿದರು.

ಮಳೆ ಕೊರತೆಯಿಂದಾಗಿ ಮುಂಗಾರು ವಿಫಲವಾಗಿದ್ದು, ಬರಗಾಲ ಘೋಷಣೆಗೆ ಸರಕಾರ ಉಪಸಮಿತಿ ರಚಿಸಿದೆ. ಈಗಾಗಲೇ 196 ತಾಲೂಕುಗಳಲ್ಲಿ ಬರ ಅಧ್ಯಯನ ಕೈಗೊಳ್ಳಲಾಗಿದೆ. ವರದಿ ಪರಿಶೀಲಿಸಿ, ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಎಷ್ಟು ತಾಲೂಕುಗಳು ಬರಪೀಡಿತ ಎಂದು ಸರ್ಕಾರ ಘೋಷಿಸಲಿದೆ ಎಂದು ತಿಳಿಸಿದ್ದಾರೆ.

ರೈತರು ಅನೇಕ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದು, ಅವುಗಳ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಅನೇಕ ಯೋಜನೆ ಜಾರಿಗೊಳಿಸಿದೆ. ದೇಶಕ್ಕೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ಕೃಷಿಭಾಗ್ಯ ಯೋಜನೆ ಮುಂದುವರಿಕೆಗೆ ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರ ರೈತರ ಬೆಳೆವಿಮೆಗಾಗಿ 900 ಕೋಟಿ ರೂ. ಮೀಸಲಿಡಲಾಗಿದೆ. ಇದರಿಂದ ಬೆಳೆವಿಮೆ ಮಾಡಿಸಿರುವ ಸುಮಾರು 16 ಲಕ್ಷ ರೈತರು ಲಾಭ ಪಡೆಯಲಿದ್ದಾರೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read