HomeAgricultureರೈತರು, ಗ್ರಾಹಕರಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಬೇಳೆ ಕಾಳು, ಬಿತ್ತನೆ ಬೀಜ

ರೈತರು, ಗ್ರಾಹಕರಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಬೇಳೆ ಕಾಳು, ಬಿತ್ತನೆ ಬೀಜ

ಬೆಂಗಳೂರು: ಗ್ರಾಹಕರ ಮನೆ ಬಾಗಿಲಿಗೆ ಅಂಚೆ ಇಲಾಖೆಯ ಮೂಲಕ ಬೇಳೆಕಾಳು, ಬಿತ್ತನೆ ಬೀಜ ತಲುಪಿಸುವ ವ್ಯವಸ್ಥೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ ಎಂದು ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಅಂಚೆ ಇಲಾಖೆ ವತಿಯಿಂದ ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ಬೆಂಗಳೂರಿನ ಹೋಟೆಲ್ ವೊಂದರಲ್ಲಿ ಸೋಮವಾರ ಆಯೋಜಿಸಿದ್ದ ಗ್ರಾಹಕರ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ಪೀಡ್ ಪೋಸ್ಟ್ ಗೆ ಸಂಬಂಧಿಸಿದಂತೆ ದ್ವಿದಳ ಧಾನ್ಯಗಳ ಅಭಿವೃದ್ಧಿ ಮಂಡಳಿ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ಗ್ರಾಹಕರಿಗೆ ಬೇಳೆ ಕಾಳು ಮತ್ತು ರೈತರಿಗೆ ಬೆತ್ತಲೆ ಬೀಜಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಗೆ ಶೀಘ್ರವೇ ಚಲನೆ ಸಿಗಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳೆಗಾರರಿಂದ ಗ್ರಾಹಕರಿಗೆ ನೇರವಾಗಿ 350 ಟನ್ ಮಾವಿನಹಣ್ಣು ಪಾರ್ಸೆಲ್ ತಲುಪಿಸಲಾಗಿದೆ. ಅಂಚೆ ಇಲಾಖೆಯ ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular