ರೈತರಿಗೆ ಮತ್ತೊಂದು ಗುಡ್ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ಉಚಿತ ಡೀಸೆಲ್ ವಿತರಣೆ; ಜ. 31 ರಂದು ‘ರೈತಶಕ್ತಿ’ ಯೋಜನೆಗೆ ಸಿಎಂ ಚಾಲನೆ

10 lakh farmers' earnings drowned due to increase in diesel prices in Gujarat - All Gujarat News

ಧಾರವಾಡ: ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 31 ರಂದು ಕೃಷಿ ಇಲಾಖೆಯ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ.

ಕೃಷಿ ವಿಶ್ವವಿದ್ಯಾಲಯದ ಆಡಳಿತ ಸಭಾಭವನದ ಸಭಾಂಗಣದಲ್ಲಿ ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ ಅವರು ಮಾಹಿತಿ ನೀಡಿದ್ದಾರೆ.

ಜ.31 ರಂದು ಮುಖ್ಯಮಂತ್ರಿಗಳು ಕೃಷಿ ಇಲಾಖೆಯ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಇಡೀ ದೇಶದಲ್ಲಿಯೇ ಪ್ರಥಮ ಬಾರಿಗೆ ರೈತರಿಗೆ ಉಚಿತ ಡೀಸೆಲ್ ಇಂಧನ ವಿತರಿಸುವ ರೈತ ಶಕ್ತಿ ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ರೈತ ಮಕ್ಕಳಿಗೆ ನೀಡುವ ರೈತನಿಧಿ ವಿದ್ಯಾರ್ಥಿ ವೇತನವನ್ನು ರೈತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸುವ ಯೋಜನೆಗೆ ಚಾಲನೆ ನೀಡುವರು. ಡಾ.ಎಸ್.ವಿ. ಪಾಟೀಲ ಫೌಂಡೇಶನ್ ಉದ್ಘಾಟಿಸುವರು.

ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾಗಿರುವ ಹಿನ್ನೆಲೆಯಲ್ಲಿ ಸಿರಿಧಾನ್ಯಗಳ ಪ್ರದರ್ಶನ ಹಾಗೂ ಸಾವಯವ ಕೃಷಿ ನೈಸರ್ಗಿಕ ಕೃಷಿ ಕುರಿತು ಹಲವಾರು ಕಾರ್ಯಕ್ರಮಗಳು ನಡೆಯಲಿವೆ. ಕೃಷಿ ಯಂತ್ರೋಪಕರಣಗಳ ವಿತರಣೆ ಸಹ ನಡೆಯಲಿದೆ ಎಂದು ಶಿವಯೋಗಿ ಕಳಸದ ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read