ರೈತರಿಗೆ ಗುಡ್ ನ್ಯೂಸ್: ಕೃಷಿಗೆ 7 ಗಂಟೆ ವಿದ್ಯುತ್, ಅಕ್ರಮ-ಸಕ್ರಮದಡಿ ಮೂಲ ಸೌಕರ್ಯ: ಸೋಲಾರ್ ಪಂಪ್ಸೆಟ್ ಗೆ ಆದ್ಯತೆ

ದಾವಣಗೆರೆ: ಸರ್ಕಾರದ ಸೂಚನೆಯಂತೆ ಬೆಸ್ಕಾಂ ರೈತರ ಪಂಪ್ ಸೆಟ್ ಗಳಿಗೆ ನಿರಂತರ ವಿದ್ಯುತ್ ಪೂರೈಕೆಗೆ ಬದ್ದವಾಗಿದ್ದು, ಮಳೆಯ ಕೊರತೆಯ ನಡುವೆ ಬೇಸಿಗೆ ನಿರ್ವಹಣೆಗಾಗಿ ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಟೆಂಡರ್ ಕರೆಯಲಾಗಿದೆ ಎಂದು ಬೆಸ್ಕಾಂ ಎಂ.ಡಿ. ಮಹಂತೇಶ್ ಬೀಳಗಿ ತಿಳಿಸಿದರು.

ಅವರು ಭಾನುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜನಪ್ರತಿನಿಧಿಗಳೊಂದಿಗೆ ದಾವಣಗೆರೆ ಜಿಲ್ಲಾ ಬೆಸ್ಕಾಂ ಕುಂದು ಕೊರತೆಯ ಸಭೆಯಲ್ಲಿ ಮಾತನಾಡಿದರು. ಈ ವರ್ಷ ಮುಂಗಾರು ಮಳೆಯ ಕೊರತೆಯಿಂದ ಜಲಾಶಯಗಳಲ್ಲಿ ನೀರು ಸಂಗ್ರಹ ಕಡಿಮೆಯಾಗಿದ್ದು, ರೈತರು ಪಂಪ್ಸೆದಟ್ಗಳ ಮೇಲೆಯೇ ಜೂನ್ ತಿಂಗಳಿನಿಂದಲೂ ಅವಲಂಭಿತವಾಗಿದ್ದರಿಂದ ತೀವ್ರ ವಿದ್ಯುತ್ ಕೊರತೆಯನ್ನು ಎದುರಿಸಬೇಕಾಗಿದೆ. ಕೊರತೆಯನ್ನು ನೀಗಿಸಲು ಈಗಾಗಲೇ ಜಿಂದಾಲ್, ಸಕ್ಕರೆ ಕಾರ್ಖಾನೆಗಳು, ಯು.ಪಿ.ಸಿ.ಎಲ್, ಸೋಲಾರ್, ವಿಂಡ್ಮಿೂಲ್ ಮೂಲಕ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಈಗ ಯಾವುದೇ ವಿದ್ಯುತ್ ಕೊರತೆಯಾಗದಂತೆ ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆ ಆರಂಭವಾಗುತ್ತಿದ್ದು, ಈ ದಿನಗಳಲ್ಲಿ ಇನ್ನಷ್ಟು ವಿದ್ಯುತ್ ಅಭಾವವಾಗಬಹುದೆಂದು ಸಾವಿರ ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಟೆಂಡರ್ ಕರೆಯಲಾಗಿದ್ದು, ಬೇಸಿಗೆಯಲ್ಲಿ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಈ ಬಗ್ಗೆ ಯಾರಿಗೂ ಆತಂಕ ಬೇಡ ಎಂದು ತಿಳಿಸಿದರು.

ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡರವರು ಸಭೆಯಲ್ಲಿ ಪ್ರಸ್ತಾಪಿಸಿ, ರೈತರಿಗೆ ನಿರಂತರವಾಗಿ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂಬ ಭರವಸೆಯಿಂದ ಬೆಳೆಗಳನ್ನು ಹಾಕಿರುವರು. ಎಷ್ಟು ಗಂಟೆಗಳ ಕಾಲ ವಿದ್ಯುತ್ ಪೂರೈಕೆಯಾಗಲಿದೆ ಎಂದು ರೈತರಿಗೆ ನಿಖರವಾಗಿ ತಿಳಿಸಿದಲ್ಲಿ ವಿದ್ಯುತ್ ಪೂರೈಕೆಯನ್ನಾಧರಿಸಿ ಬೆಳೆಯನ್ನು ಬೆಳೆಯುತ್ತಾರೆ ಎಂದಾಗ ಬೆಸ್ಕಾಂ ಎಂಡಿಯವರು, ಕಳೆದ ಅಕ್ಟೋಬರ್ ತಿಂಗಳಲ್ಲಿ ವಿದ್ಯುತ್ ಕೊರತೆಯಾಗಿದ್ದರಿಂದ ವ್ಯತ್ಯಯವಾಗಿದ್ದು, ಮುಂದಿನ ದಿನಗಳಲ್ಲಿ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆಗೆ ಬೆಸ್ಕಾಂ ಬದ್ದವಾಗಿದೆ ಎಂದರು.

ಕಾಲಮಿತಿಯಲ್ಲಿ ಟಿಸಿ ಬದಲಾವಣೆ; ಎಲ್ಲಾ ತಾಲ್ಲೂಕುಗಳಲ್ಲಿ ಸ್ಥಳೀಯವಾಗಿ ಟಿಸಿ ರಿಪೇರಿ ಕೇಂದ್ರಗಳಿದ್ದು, ರೈತರಿಗೆ ಕಾಲಮಿತಿಯಲ್ಲಿ ಸುಟ್ಟ ಟಿಸಿಗಳನ್ನು ಬದಲಾಯಿಸಬೇಕು ಎಂದರು.

  ಸೋಲಾರ್ ಪಂಪ್ ಸೆಟ್ ಗೆ ಆದ್ಯತೆ;

ರೈತರ ಪಂಪ್ ಸೆಟ್ ಗಳ ಅಕ್ರಮ ಸಕ್ರಮ ಯೋಜನೆಯನ್ನು 2023 ರ ಸೆಪ್ಟೆಂಬರ್ 22 ಕ್ಕೆ ನೊಂದಣಿಯನ್ನು ಸ್ಥಗಿತಗೊಳಿಸಲಾಗಿದೆ. 500 ಮೀಟರ್ ವ್ಯಾಪ್ತಿಯ ಒಳಗೆ ಇರುವ ಪಂಪ್ ಸೆಟ್ಗ0ಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ವಿದ್ಯುತ್ ಸಂಪರ್ಕ ಸಕ್ರಮ ಮಾಡಲಾಗುತ್ತದೆ. 500 ಮೀಟರ್ ಗಿಂತ ಹೆಚ್ಚಿದ್ದಲ್ಲಿ ಸೋಲಾರ್ ಪಂಪ್ಸೆರಟ್ ಅಳವಡಿಕೆಗೆ ಪ್ರೋತ್ಸಾಹಿಸಲಾಗುತ್ತದೆ. ಸೋಲಾರ್ ಪಂಪ್ ಸೆಟ್ ಅಳವಡಿಕೆಗೆ ಪಿಎಂ ಕುಸುಮ.ಬಿ ಯೋಜನೆಯಡಿ ಅವಕಾಶ ಇದ್ದು ಫಲಾನುಭವಿ ವಂತಿಗೆ ಶೇ 20 ರಷ್ಟು ಪಾವತಿಸಬೇಕು. ಈಗಾಗಲೇ ಮಹಾರಾಷ್ಟ್ರದಲ್ಲಿ ಈ ಯೋಜನೆ ಯಶಸ್ವಿಯಾಗಿದ್ದು ಸಾವಿರ ಅಡಿ ಆಳ, ಎರಡು ಕಿ.ಮೀ ದೂರದವರೆಗೆ 7.5 ಹೆಚ್ಪಿಾ ಸೋಲಾರ್ ಪಂಪ್ಸೆಕಟ್ ನಿರಂತರವಾಗಿ ನೀರನ್ನು ತಳ್ಳುತ್ತದೆ. ಈ ಸ್ಥಳಗಳನ್ನು ಬೆಸ್ಕಾಂ ತಾಂತ್ರಿಕ ತಂಡ ಸ್ಥಳ ಪರಿಶೀಲನೆ ಮಾಡಿಕೊಂಡು ಬಂದಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತದೆ ಎಂದರು.

ಅಕ್ರಮ ಸಕ್ರಮಕ್ಕೆ 310 ಕೋಟಿ; 2023 ರ ಸೆಪ್ಟೆಂಬರ್ 22 ರೊಳಗಾಗಿ ಅಕ್ರಮ ಸಕ್ರಮದಲ್ಲಿ ನೋಂದಾಯಿಸಿದ ರೈತರ ಪಂಪ್ಸೆ್ಟ್ಗ1ಳನ್ನು ಸಕ್ರಮ ಮಾಡಲು ಈಗಾಗಲೇ ಟೆಂಡರ್ ಕರೆದು ಅನುಮೋದನೆ ನೀಡಿ ಜಿಲ್ಲೆಯಲ್ಲಿ ನೋಂದಾಯಿಸಿದ ಹರಪನಹಳ್ಳಿ ಮತ್ತು ತೆಲಗಿ ಸೇರಿದಂತೆ ದಾವಣಗೆರೆ ಜಿಲ್ಲೆಯಲ್ಲಿ 15615 ಪಂಪ್ಸೆಂಟ್ಗಳ ಸಕ್ರಮಕ್ಕಾಗಿ 310 ಕೋಟಿ ಅನುದಾನ ಹಂಚಿಕೆ ಮಾಡಿ ಬಿಡುಗಡೆ ಮಾಡಲಾಗಿದೆ ಎಂದು ಎಂ.ಡಿ.ಯವರು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read