ಅಕ್ರಮ –ಸಕ್ರಮ ನಿರೀಕ್ಷೆಯಲ್ಲಿರುವ ರಾಜ್ಯದ ರೈತಾಪಿ ವರ್ಗಕ್ಕೆ ಇಲ್ಲಿದೆ ಗುಡ್ ನ್ಯೂಸ್

ಮಡಿಕೇರಿ: ಸರ್ಕಾರ ವಿವಿಧ ಕಡೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಲು ಮುಂದಾಗಿದೆ ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು.

ವಿದ್ಯುತ್ ಉಪ ಕೇಂದ್ರಗಳು ಎಲ್ಲೆಲ್ಲಿ ಅಗತ್ಯವಿದೆ. ಅಂತಹ ಕಡೆಗಳಲ್ಲಿ ವಿದ್ಯುತ್ ಉಪ ಕೇಂದ್ರ ನಿರ್ಮಾಣಕ್ಕೆ ಮುಂದಾಗಲಾಗುವುದು. ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮವಹಿಸಲಾಗುವುದು. ರಾಜ್ಯದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಸೋಲಾರ್ ಬಳಕೆಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ ಎಂದರು.

ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಿವಿಧ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ 208 ಕೋಟಿ ರೂ. ವಿನಿಯೋಗ ಮಾಡಲಾಗುತ್ತದೆ. ಸೋಮವಾರಪೇಟೆ, ಮಾದಾಪುರ, ಮೂರ್ನಾಡು, ಹುದಿಕೇರಿ, ಬಾಳೆಲೆ, ಸಿದ್ದಾಪುರ, ಕೂಡಿಗೆ, ಕೋಪಟ್ಟಿ, ಸಂಪಾಜೆ, ಕೊಡ್ಲಿಪೇಟೆ, ಕಾಟಕೇರಿ, ಕಳತ್ಮಾಡು, ಮರುಗೋಡು ಕೇಂದ್ರಗಳಲ್ಲಿ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಮುಂದಾಗಲಾಗಿದೆ. ಆ ನಿಟ್ಟಿಲ್ಲಿ ಈಗಾಗಲೇ ಹಲವು ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಟೆಂಡರ್ ಆಹ್ವಾನಿಸಲಾಗಿದೆ ಎಂದರು.

ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲಾ ಕುಗ್ರಾಮಗಳಿಗೂ ಸಹ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಸೆಸ್ಕ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯ ನಿರ್ವಹಿಸುವಂತೆ ಸಚಿವರು ಸೂಚಿಸಿದರು.

ಜಿಲ್ಲೆಯಲ್ಲಿ 636 ಮಂಜೂರಾದ ಹುದ್ದೆಗಳಿದ್ದು, 242 ಮಂದಿ ಕಾರ್ಯನಿರ್ವಹಿಸುತಿದ್ದಾರೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೂಡಲೇ ಕ್ರಮವಹಿಸಲಾಗುವುದು ಎಂದು ಕೆ.ಜೆ.ಜಾರ್ಜ್ ಅವರು ತಿಳಿಸಿದರು.

ಗೃಹಜ್ಯೋತಿ ಯೋಜನೆಯು ರಾಜ್ಯಾದ್ಯಂತ ಉತ್ತಮವಾಗಿ ನಡೆಯುತ್ತಿದ್ದು, ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 1,56,022  ಕುಟುಂಬಗಳು ಹೆಸರು ನೋಂದಣಿ ಮಾಡಿದ್ದು, ಶೇ.99.59 ರಷ್ಟು ಪ್ರಗತಿ ಸಾಧಿಸಲಾಗಿದೆ. ಇದಕ್ಕಾಗಿ ಪ್ರತಿ ತಿಂಗಳು 6.9 ಕೋಟಿ ಸಹಾಯಧನ ಬೇಡಿಕೆ ಇದೆ ಎಂದು ಮಾಹಿತಿ ನೀಡಿದರು.

ಮುಖ್ಯಮಂತ್ರಿ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತತ್ ಗೌಡ, ಸೆಸ್ಕ್ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ,  ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಶೀಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಇಂಧನ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read