ರಾಜ್ಯದ ರೈತರೇ ಗಮನಿಸಿ : `ಫ್ರೂಟ್’ ತಂತ್ರಾಂಶದ ಆಧಾರದಲ್ಲಿ `ಬರ ಪರಿಹಾರ’ ವಿತರಣೆ

ಬೆಂಗಳೂರು : ಅಕ್ರಮಗಳನ್ನು ತಡೆಯುವುದಕ್ಕಾಗಿ ಫ್ರೂಟ್ಸ್‌ ದತ್ತಾಂಶದ ಆಧಾರದಲ್ಲಿ ಪರಿಹಾರ ವಿತರಣೆಗೆ ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಳೆ ವಿಮೆ ನೋಂದಣಿಗೆ ಕನಿಷ್ಟ ಬೆಂಬಲ ಬೆಲೆಯಲ್ಲಿ, ಕೃಷಿ ಉತ್ಪನ್ನ ಮಾರಾಟ ಮಾಡಲು ಬೆಳೆ ಸಾಲ ಪಡೆಯಲು, ಬೆಳೆ ಹಾನಿಗೆ ಪರಿಹಾರ ಪಡೆಯಲು ಹಾಗೂ ಇತರೆ ಸೌಲಭ್ಯ ಪಡೆಯಲು ರೈತರ ಗುರುತಿನ ಸಂಖ್ಯೆ (ಎಫ್‌ಐಡಿ) ಕಡ್ಡಾಯವಾಗಿದೆ.

ಆದ್ದರಿಂದ  ಎಫ್‌ಐಡಿ (ರೈತರ ಗುರುತಿನ ಸಂಖ್ಯೆ) ಮಾಡಿಸದ  ರೈತರು ಕೂಡಲೇ ಕೃಷಿ ಅಥವಾ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ತಮ್ಮ ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್‌ಬುಕ್, ಮೊಬೈಲ್  ಸಂಖ್ಯೆಯೊಂದಿಗೆ ತೆರಳಿ ನೋಂದಣಿ ಮಾಡಿಸಿ ಎಫ್‌ಐಡಿ ಸಂಖ್ಯೆ ಪಡೆಯಬೇಕು. ದಾಖಲಿಸಿದ ಜಮೀನಿನ ವಿಸ್ತೀರ್ಣಗಳಿಗೆ ಮಾತ್ರ ಸರ್ಕಾರದ ಪರಿಹಾರ ಸೌಲಭ್ಯ ದೊರೆಯುವುದರಿಂದ ರೈತ ಬಾಂಧವರು ತಾವು ಹೊಂದಿರುವ ಎಲ್ಲಾ ಜಮೀನಿನ ಸರ್ವೆ ನಂಬರಗಳನ್ನು, ವಿಸ್ತೀರ್ಣಗಳನ್ನು ಕೂಡಲೇ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಿಕೊಳ್ಳಬೇಕು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read