ರಾಜ್ಯದ ರೈತರೇ ಗಮನಿಸಿ : ಈ ಕೆಲಸ ಮಾಡದಿದ್ರೆ ಸಿಗಲ್ಲ ʻಬರ ಪರಿಹಾರʼದ ಹಣ!

ಬೆಂಗಳೂರು : ರಾಜ್ಯ ಸರ್ಕಾರವು ಬರ ಪರಿಹಾರ ಬಿಡುಗಡೆ ಮಾಡಿದ್ದು, ರೈತರು ಬರಪರಿಹಾರ ಪಡೆಯಲು ತಕ್ಷಣವೇ ಪ್ರಮುಖ ಕೆಲಸ ಮಾಡಿಕೊಳ್ಳಬೇಕು ಎಂದು ಸರ್ಕಾರ ಸೂಚನೆ ನೀಡಿದೆ.

ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ ಹಿನ್ನೆಲೆ ರಾಜ್ಯ ಸರ್ಕಾರದಿಂದ ಪ್ರತಿ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಲಾಗಿದೆ. ಎಸ್​ಡಿಆರ್​ಎಫ್​ ಪರಿಹಾರ ನಿಧಿ ಅಡಿಯಲ್ಲಿ ಸರ್ಕಾರದಿಂದ 105 ಕೋಟಿ ರೂ. ಅನುದಾನ ನೀಡಲಾಗಿದ್ದು, ರೈತರಿಗೆ 2 ಸಾವಿರ ರೂಪಾಯಿ ಪರಿಹಾರ ಬಿಡುಗಡೆ ಮಾಡಲಾಗಿದೆ.

ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು ಎಂದು ಸೂಚನೆ ನೀಡಲಾಗಿದೆ.

ಬೆಳೆಹಾನಿಗೆ ಇನಪುಟ್ ಸಬ್ಸಿಡಿ ದರ ನಿಗದಿ

ಮಳೆಯಾಶ್ರಿತ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್​ಗೆ 8500 ರೂ.

ನೀರಾವರಿ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್​​ಗೆ 17,500 ರೂ.

ಬಹುವಾರ್ಷಿಕ ಬೆಳೆ ಹಾನಿಗೆ ಹೆಕ್ಟೇರ್​ಗೆ 22,500 ರೂ. ಅನುದಾನ ಬಿಡುಗಡೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read