HomeKarnatakaರಾಜ್ಯದ ರೈತರೇ ಗಮನಿಸಿ : ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ

ರಾಜ್ಯದ ರೈತರೇ ಗಮನಿಸಿ : ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಡಿಸೆಂಬರ್‌ 1 ರ ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಅವಕಾಶ ನೀಡಿದೆ.

ರಾಗಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಈ ಹಿಂದೆ ವಿಧಿಸಿದ್ದ ಷರತ್ತುಗಳನ್ನು ರಾಜ್ಯ ಸರ್ಕಾರ ಸಡಿಲಿಸಿದೆ. ರಾಗಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಆದೇಶ ಹೊರಡಿಸಿದ್ದು, ಇಂದಿನಿಂದ ರೈತರು ಐಡಿ ಜೊತೆಗೆ ನೋಂದಣಿ ಕೇಂದ್ರಗಳಿಗೆ ಹೋಗಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ಜಿಲ್ಲೆಯಲ್ಲೂ ರಾಗಿ ಖರೀದಿ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ. ಇಂದಿನಿಂದ ನೋಂದಣಿ ಕಾರ್ಯ ಆರಂಭವಾಗಲಿದ್ದು, 2024 ರ ಜ.1, ಮಾರ್ಚ್ 31  ರ ವರೆಗೆ ಖರೀದಿ ಕಾರ್ಯ ನಡೆಯಲಿದೆ. ಈ ಬಾರಿ ಪ್ರತಿ ಎಕರೆಗೆ 10 ಕ್ವಿಂಟಾಲ್‌ ರಾಗಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಸಣ್ಣ ಮತ್ತು ದೊಡ್ಡ ರೈತರು ಎನ್ನದೆ ಎಲ್ಲ ರೈತರಿಂದಲೂ ರಾಗಿ ಖರೀದಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular