ರೈತರಿಗೆ ಇಲ್ಲಿದೆ ಗುಡ್ ನ್ಯೂಸ್: ಕೃಷಿ ಯಂತ್ರೋಪಕರಣ ಖರೀದಿ, ಇತರ ತೋಟಗಾರಿಕಾ ಕಾರ್ಯಗಳಿಗೆ ಸಹಾಯಧನ

ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ತಂತ್ರಜ್ಞಾನ ಅಭಿಯಾನ ಯೋಜನೆಯ ಕೃಷಿ ಯಾಂತ್ರೀಕರಣ ಉಪ ಅಭಿಯಾನ ಕಾರ್ಯಕ್ರಮದಡಿ ಕೃಷಿ ಯಂತ್ರೋಪಕರಣ ಖರೀದಿಸುವ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಸಹಾಯ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ರೈತರು ಖರೀದಿಸುವ ಕೃಷಿ ಯಂತ್ರೋಪಕರಣಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತೀ ಸಣ್ಣ ಹಾಗೂ ಮಹಿಳಾ ಫಲಾನುಭವಿಗಳಿಗೆ ಶೇ.50 ರ ಸಹಾಯಧನ ಹಾಗೂ ಇತರೆ ವರ್ಗದ ಫಲಾನುಭವಿಗಳಿಗೆ ಶೇ.40 ರ ಸಹಾಯಧನದ ಸೌಲಭ್ಯವಿರುತ್ತದೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಸಂಪರ್ಕಿಸಬಹುದು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮೋಹಕ ಕೀಟ ಬಲೆ, ಜಿಗುಟಾದ ಬಲೆಗಳು, ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳ ಮಿಶ್ರಣ, ಕೊಯ್ಲೋತ್ತರ ನಂತರದ ಚಟುವಟಿಕೆಗಳಿಗೆ ಬಳಸುವ ಪ್ಲಾಸ್ಟಿಕ್ ಕ್ರೇಟ್ಸ್, ಪುನೇಟ್ ಬಾಕ್ಸ್, ಕೊರುಗೇಟೆಡ್ ಬಾಕ್ಸ್ ಗಳನ್ನು ಅನುಮೋದಿತ ಸಂಸ್ಥೆಯವರಿಂದ ಖರೀದಿಗೆ ಸಹಾಯಧನದ ಸೌಲಭ್ಯವಿರುತ್ತದೆ.

ಹಣ್ಣಿನ ಗಿಡಗಳ ಮೇಲಾವರಣ ನಿರ್ವಹಣೆ ಮತ್ತು ಕ್ಷೇತ್ರ ಮಟ್ಟದಲ್ಲಿ ವಿಂಗಡಣೆ, ಪ್ಯಾಕಿಂಗ್ ಮತ್ತು ಸಂಗ್ರಹಣಾ ಘಟಕಗಳ ನಿರ್ಮಾಣಕ್ಕೆ ಸಹಾಯಧನದ ಸೌಲಭ್ಯವಿರುತ್ತದೆ. ಆಸಕ್ತ ತೋಟಗಾರಿಕೆ ಬೆಳೆಗಾರರು ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರವರ ಕಛೇರಿಗೆ ಸಂಪರ್ಕಿಸಬಹುದೆಂದು ಧಾರವಾಡ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read