ಮುಂಗಾರು ಕೃಷಿ ಚಟುವಟಿಕೆ ಕೈಗೊಂಡ ರೈತರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹಾವೇರಿಯಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕಾಗಿ ರೈತರು ಸಾಲುಗಟ್ಟಿ ನಿಂತಿರುವ ಮಾಹಿತಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೃಷಿ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ತಕ್ಷಣವೇ ಕೃಷಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ರೈತರಿಗೆ ಅಗತ್ಯವಿರುವ ಬೀಜ, ಗೊಬ್ಬರದ ದಾಸ್ತಾನು ಬಗ್ಗೆ ಮಾಹಿತಿ ಪಡೆದುಕೊಳ್ಳಿ. ಮುಂಗಾರು ಕೃಷಿಗೆ ರೈತರಿಗೆ ತೊಂದರೆಯಾಗದಂತೆ ಬೀಜ, ಗೊಬ್ಬರ ಪೂರೈಸಲು ಅಗತ್ಯಕ್ರಮ ಕೈಗೊಳ್ಳಿ ಎಂದು ತಿಳಿಸಿದ್ದಾರೆ.

https://twitter.com/siddaramaiah/status/1792908679064236501

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read