ರೈತರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಜಮಾ ಆಗಲ್ಲ ʻಬರ ಪರಿಹಾರʼದ ಹಣ!

ಬೆಂಗಳೂರು : ರಾಜ್ಯ ಸರ್ಕಾರವು ಈ ವಾರವೇ ಬರ ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡುವುದಾಗಿ ಹೇಳಿದ್ದು, ರೈತರು ತಪ್ಪದೇ ಪಹಣಿ –ಆಧಾರ್‌ ಕಾರ್ಡ್‌ ಜೋಡಣೆ ಮಾಡಬೇಕು.

ರಾಜ್ಯ ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್‍ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ಇದುವರೆಗೂ ಫ್ರುಟ್ಸ್ ನಲ್ಲಿ ನೊಂದಣಿ ಆಗದೇ ಇರುವ ರೈತರು ಆಧಾರ್ ಕಾರ್ಡ್, ಪಹಣಿ, ಜಾತಿ ಪ್ರಮಾಣಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ವಿವರಗಳನ್ನು ಫ್ರುಟ್ಸ್‍ನಲ್ಲಿ ದಾಖಲಿಸಿಕೊಂಡು ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಹಾಗೂ ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಕೋರಲಾಗಿದೆ.

ಫ್ರುಟ್ಸ್ ತಂತ್ರಾಂಶದಲ್ಲಿ ರೈತರು ತಮ್ಮ ಜಮೀನಿನ ವಿವರವನ್ನು ನೊಂದಾಯಿಸಿ, ರೈತರ ಗುರುತಿನ ಚೀಟಿ ಸಂಖ್ಯೆ ಪಡೆದುಕೊಳ್ಳುವುದು ಅಗತ್ಯವಾಗಿರುತ್ತದೆ. ಈ ಮಾಹಿತಿಯು ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ನೀಡುವುದಲ್ಲದೆ, ಇತರೆ ಇಲಾಖೆಗಳಿಗೂ ಸಹ ಉತ್ತಮ ಮಾಹಿತಿಯಾಗಿರುತ್ತದೆ. ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂದರ್ಭದಲ್ಲಿ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿಗಳಾಗಲು ಹಾಗೂ ಪರಿಹಾರ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲು ರೈತರು ಫ್ರುಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಸಿ, ಎಫ್‍ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದೆ.

ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಂಡವರು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಫ್ರುಟ್ಸ್ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೆ ಜೋಡಣೆ ಮಾಡಲು ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳು, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ರೇಷ್ಮೆ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read