ಆತ್ಮಹತ್ಯೆಗೀಡಾದ ರೈತರ ಪತ್ನಿಯರಿಗೆ 2,000 ರೂ. ಪಿಂಚಣಿ ಮರು ಜಾರಿ

ಹಾವೇರಿ: ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ 2000 ರೂ. ಪಿಂಚಣಿ ಸಹಾಯಧನ ನೀಡುವ ಯೋಜನೆಯನ್ನು ಮರು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಾವೇರಿಯಲ್ಲಿ ಕೆಡಿಪಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ಈ ಹಿಂದೆ ನಮ್ಮ ಸರ್ಕಾರದಿಂದ ಮಾಸಿಕ 2,000 ಸಹಾಯಧನ ನೀಡಲಾಗುತ್ತಿತ್ತು. ಆ ಯೋಜನೆಯನ್ನು ಮತ್ತೆ ಆರಂಭಿಸುವುದಾಗಿ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗಿದೆ ಎಂಬ ಕಾರಣಕ್ಕೆ ಇಲ್ಲೇ ಮೊದಲು ಕೆಡಿಪಿ ಸಭೆ ನಡೆಸಿದ್ದೇನೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರೈತರ ಆತ್ಮಹತ್ಯೆ ಕಡಿಮೆ ಇದೆ. ರೈತರ ಆತ್ಮಹತ್ಯೆ ತಡೆಗೆ, ರೈತರಿಗೆ ಅನುಕೂಲ ಕಲ್ಪಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read