HomeKarnatakaರಾಜ್ಯದ ರೈತರಿಗೆ ಸಿಹಿ ಸುದ್ದಿ: ಯುಗಾದಿ ಉಡುಗೊರೆಯಾಗಿ ಖಾತೆಗೆ 2000 ರೂ. ಜಮಾ

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಯುಗಾದಿ ಉಡುಗೊರೆಯಾಗಿ ಖಾತೆಗೆ 2000 ರೂ. ಜಮಾ

ಬಾಗಲಕೋಟೆ: ರಾಜ್ಯದ ರೈತರಿಗೆ ಯುಗಾದಿ ಹಬ್ಬದ ಉಡುಗೊರೆ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿ ರೈತರಿಗೆ 975 ಕೋಟಿ ರೂ. ಜಮಾ ಮಾಡಲಾಗಿದೆ.

ರಾಜ್ಯದ 48,75.000 ರೈತರ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022 -23ನೇ ಸಾಲಿನ ಎರಡನೇ ಕಂತಿನ ಹಣವನ್ನು ವರ್ಗಾವಣೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಿಎಂ ಕಿಸಾನ್ ಕರ್ನಾಟಕ ವಿಭಾಗದಿಂದ ಈ ನಿಧಿ ಜಮಾ ಮಾಡಲಾಗಿದೆ. ಭಾರತದಲ್ಲಿರುವ ಭೂಹಿಡುವಳಿ ಹೊಂದಿರುವ ರೈತರಿಗೆ ಆದಾಯ ಬೆಂಬಲ ಒದಗಿಸುವ ಯೋಜನೆ ಇದಾಗಿದ್ದು, ಕೇಂದ್ರ ಸರ್ಕಾರದಿಂದ 6000 ರೂ. ಹಾಗೂ ರಾಜ್ಯ ಸರ್ಕಾರದಿಂದ 4000 ರೂ. ಸೇರಿ ರೈತರಿಗೆ ಒಟ್ಟು 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular