ಕರ್ನಾಟಕದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ತೆಲಂಗಾಣಕ್ಕೆ ನೀರು ಹರಿಸಿದ್ದನ್ನು ಪ್ರತಿಭಟಿಸಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಖಂಡ ಕರ್ನಾಟಕ ರೈತ ಸಂಘದ ಸದಸ್ಯರು ಕೃಷ್ಣಾ ನದಿಗೆ ಇಳಿದು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡರು, ರಾಜ್ಯದ ರೈತರ ಹಿತವನ್ನು ಕಡೆಗಣಿಸಿ ತೆಲಂಗಾಣಕ್ಕೆ ನೀರು ಹರಿಸಲಾಗಿದೆ ಎಂದು ಆರೋಪಿಸಿದ್ದಾರೆ. “ಸರ್ಕಾರವು ಕೇವಲ 1.24 ಟಿಎಂಸಿ ನೀರು ಬಿಟ್ಟಿದ್ದೇವೆ ಎಂದು ಸುಳ್ಳು ಹೇಳುತ್ತಿದೆ. ಆದರೆ, 10 ಟಿಎಂಸಿಗೂ ಹೆಚ್ಚು ನೀರು ಹರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು” ಎಂದು ರೈತರು ಆಗ್ರಹಿಸಿದರು.
“ನಿತ್ಯ ಆಲಮಟ್ಟಿಯಿಂದ 12 ಕ್ಯೂಸೆಕ್ ನೀರನ್ನು ನಾರಾಯಣ ಜಲಾಶಯಕ್ಕೆ ಹರಿಸುವ ಉದ್ದೇಶವಿದ್ದರೂ, ಜಿಲ್ಲೆಯ ಜನಪ್ರತಿನಿಧಿಗಳು ಈ ಬಗ್ಗೆ ಪ್ರಶ್ನಿಸುತ್ತಿಲ್ಲ. ಪ್ರತಿಪಕ್ಷದವರು ಸುಮ್ಮನಿರುವುದು ಜಿಲ್ಲೆಯ ದೌರ್ಭಾಗ್ಯ” ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.