HomeLive NewsBIG NEWS: ಪ್ರತಿಭಟನೆ ವೇಳೆ ಊಟದಲ್ಲಿ ವಿಷಬೆರೆಸಿ ಸೇವಿಸಿ ರೈತನಿಂದ ಆತ್ಮಹತ್ಯೆಗೆ ಯತ್ನ

BIG NEWS: ಪ್ರತಿಭಟನೆ ವೇಳೆ ಊಟದಲ್ಲಿ ವಿಷಬೆರೆಸಿ ಸೇವಿಸಿ ರೈತನಿಂದ ಆತ್ಮಹತ್ಯೆಗೆ ಯತ್ನ

ದೇವನಹಳ್ಳಿ: ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಮೀನು ಕಳೆದುಕೊಳ್ಳುವ ಆತಂಕದಲ್ಲಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಈ ವೇಳೆ ರೈತನೋರ್ವ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಪ್ರತಿಭಟನ ಸ್ಥಳದಲ್ಲಿ ಹೋರಾಟ ತೀವ್ರಗೊಂಡಿದ್ದು, ಈ ವೇಳೆ ಊಟಕ್ಕೆ ವಿಷಬೆರೆಸಿ ರೈತರೊಬ್ಬರು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರೈತ ವೆಂಕಟೇಶ್ ಆತ್ಮಹತ್ಯೆಗೆ ಯತ್ನಿಸಿದವರು. ತೀವ್ರ ಅಸ್ವಸ್ಥರಾಗಿರುವ ವೆಂಕಟೇಶ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ವಾರದೊಳಗೆ ಅಂತಿಮ ನಿರ್ಧಾರ ಪ್ರಕಟಿಸುವ ಭರವಸೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಹೋರಾಟ ಕೈಬಿಡುವಂತೆ ರೈತರಿಗೆ ಮನವಿ ಮಾಡಿದ್ದರು. ಆದರೆ ಕೆಐಎ ಡಿಬಿ ಇತ್ತೀಚೆಗೆ ಹೊರಡಿಸಿರುವ ಭೂಸ್ವಾಧೀನ ಪತ್ರ ರೈತರನ್ನು ಕಂಗಾಲಾಗಿಸಿದೆ. ಈ ನಿಟ್ಟಿನಲ್ಲಿ ಸಚಿವ ಮುನಿಯಪ್ಪ ಭೇಟಿಗೆಂದು ಬೆಂಗಳೂರಿನತ್ತ ಹೊರಟ ರೈತರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ರೈತರು, ಪೊಲೀಸರ ನಡುವೆ ವಾಗ್ವಾದ ನಡೆದು, ರೈತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಧರಣಿ ಸ್ಥಳದಲ್ಲೇ ರೈತ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular