ಬೆಳಗಾವಿ : ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ನಾಳೆ ಬೆಳಗಾವಿ ಬಂದ್ ಗೆ ಕರೆ ನೀಡಲಾಗಿದೆ.
ರಾಜ್ಯ ಸರ್ಕಾರದ ನಡೆ ಖಂಡಿಸಿ ಶಿವರಾಮೇಗೌಡ ಬಣ ನಾಳೆ ಬೆಳಗಾವಿ ಜಿಲ್ಲೆ ಬಂದ್ ಗೆ ಕರೆ ನೀಡಿದೆ.
ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬೆಳಗಾವಿ ಬಂದ್ ಗೆ ಕರೆ ನೀಡಲಾಗಿದೆ.ಇನ್ನೊಂದು ಕಡೆ ಬೆಳಗಾವಿ ಡಿಸಿ ಜೊತೆ ಸಚಿವ ಶಿವಾನಂದ್ ಪಾಟೀಲ್ ಸಭೆ ನಡೆಸುತ್ತಿದ್ದಾರೆ. ಸರ್ಕಾರ ನಮ್ಮ ಸಂಕಷ್ಟ ಆಲಿಸದಿದ್ರೆ ಉಗ್ರ ಹೋರಾಟ ಮಾಡುವುದಾಗಿ ರೈತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಸರ್ಕಾರ ರೈತರ ಮನವೊಲಿಸುತ್ತಾ ಕಾದು ನೋಡಬೇಕಾಗಿದೆ.
ಬೆಳಗಾವಿಯ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ, ಅಹೋರಾತ್ರಿ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸುವಂತೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಕರವೇ ಕಾರ್ಯಕರ್ತರು ಸುವರ್ಣಸೌಧದ ಬಳಿ ಹೆದ್ದಾರಿ ತಡೆ ನಡೆಸಿದ್ದು, ಲಾರಿಗಳನ್ನು ನಿಲ್ಲಿಸಿ, ಲಾರಿ ಏರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಹೆದ್ದಾರಿಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಸರ್ಕಾರ ಕೂಡಲೇ ಕಬ್ಬು ಬೆಳೆಗಾರರಿಗೆ 3500 ರೂಪಾಯಿ ಬೆಣ್ಬಲ ಬೆಲೆ ನಿಗದಿ ಮಾಡಬೇಕು. ಎಲ್ಲಾ ರೈತರ ಸಂಕಷ್ಟ ಆಲಿಸುವಂತೆ ಒತ್ತಾಯಿಸಿದ್ದಾರೆ.
