HomeAgricultureರೈತರಿಗೆ ಗುಡ್ ನ್ಯೂಸ್: 40 ಸಾವಿರ ಸೋಲಾರ್ ಪಂಪ್ಸೆಟ್ ವಿತರಣೆ, ಸಹಾಯಧನ ಮೊತ್ತ ಹೆಚ್ಚಳ

ರೈತರಿಗೆ ಗುಡ್ ನ್ಯೂಸ್: 40 ಸಾವಿರ ಸೋಲಾರ್ ಪಂಪ್ಸೆಟ್ ವಿತರಣೆ, ಸಹಾಯಧನ ಮೊತ್ತ ಹೆಚ್ಚಳ

ಬೆಂಗಳೂರು: ರೈತರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಕೃಷಿ ವಲಯದಲ್ಲಿ ನವೀಕರಿಸಬಹುದಾದ ಶಕ್ತಿಯ ಬಳಕೆಯನ್ನು ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ.

40,000 ಆಫ್ ಗ್ರಿಡ್ ಸೋಲಾರ್ ಪಂಪ್ಸೆಟ್ ಗಳನ್ನು ಸ್ಥಾಪಿಸುವುದಾಗಿ ಸಿಎಂ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ಶೇಕಡ 30ರಷ್ಟು ಪಾಲು ನೀಡಲಿದ್ದು, ರಾಜ್ಯ ಸರ್ಕಾರದ ವತಿಯಿಂದ ನೀಡುವ ಸಹಾಯಧನವನ್ನು ಶೇಕಡ 30 ರಿಂದ ಶೇಕಡ 50ಕ್ಕೆ ಹೆಚ್ಚಳ ಮಾಡಲಾಗಿದೆ.

ಕೃಷಿ ಪಂಪ್ಸೆಟ್ ಫೀಡರ್ ಸೋಲಾರೈಸೇಶನ್ ಯೋಜನೆ ಹಂತ-1ರ ಅಡಿಯಲ್ಲಿ 3.37 ಲಕ್ಷ ರೈತರಿಗೆ ಅನುಕೂಲವಾಗುವಂತೆ ವಿಕೇಂದ್ರೀಕೃತ ರೀತಿಯಲ್ಲಿ 1320 ಮೆಗಾ ವ್ಯಾಟ್ ಶಕ್ತಿ ಉತ್ಪಾದಿಸಲಾಗುತ್ತಿದೆ. ಮುಂದಿನ ಹಂತದಲ್ಲಿ 4.30 ಲಕ್ಷ ನೀರಾವರಿ ಪಂಪ್ಸೆಟ್ ಗಳಿಗೆ ಶಕ್ತಿ ನೀಡಲು 1192 ಮೆಗಾ ವ್ಯಾಟ್ ಸೋಲಾರ್ ಯೋಜನೆಗಳನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular